ದೆಹಲಿ- ಸ್ಯಾನ್ ಫ್ರಾನ್ಸಿಸ್ಕೋಗೆ ನೇರ ವಿಮಾನ ಸೌಲಭ್ಯ ಘೋಷಿಸಿದ ಮೋದಿ
ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ನವದೆಹಲಿ- ಸ್ಯಾನ್ ಫ್ರಾನ್ಸಿಸ್ಕೊ ನಡುವೆ ನೇರ ವಿಮಾನ ಸೌಲಭ್ಯವನ್ನು ಘೋಷಿಸಿದ್ದಾರೆ.
ಸ್ಯಾನ್ ಜೋಸ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನವದೆಹಲಿ- ಸ್ಯಾನ್ ಫ್ರಾನ್ಸಿಸ್ಕೊ ನಡುವೆ ನೇರ ವಿಮಾನ ಸೌಲಭ್ಯವನ್ನು ಘೋಷಿಸಿದ್ದಾರೆ.
ವಾರದಲ್ಲಿ ಮೂರು ದಿನ ನೇರ ಸಂಪರ್ಕ ಕಲ್ಪಿಸುವ ವಿಮಾನ ಸೌಲಭ್ಯ ಇರಲಿದ್ದು, ಡಿ.2 ರಿಂದ ಅಸ್ತಿತ್ವಕ್ಕೆ ಬರಲಿದೆ. ಏರ್ ಇಂಡಿಯಾ ವಿಮಾನ ಪ್ರತಿ ವಾರದಲ್ಲಿ ಮೂರು ದಿನ ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಪ್ರಯಾಣಿಸಲಿದೆ. ಎಸ್ ಎಪಿ ಸೆಂಟರ್ ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ನಂತರ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ.
ಸುಮಾರು ಒಂದು ಗಂಟೆಯ ಭಾಷಣ ಮುಕ್ತಾಯಗೊಂಡ ನಂತರ ಈ ವಿಷಯವನ್ನು ಘೋಷಣೆ ಮಾಡುವುದಕ್ಕಾಗಿಯೇ ಪ್ರಧಾನಿ ಮೋದಿ ಮತ್ತೊಮ್ಮೆ ವೇದಿಕೆಗೆ ಬಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.