ದಕ್ಷಿಣ ಚೀನಾದಲ್ಲಿ ಸರಣಿ ಬಾಂಬ್ ಸ್ಫೋಟ; 6 ಮಂದಿ ಸಾವು
ದಕ್ಷಿಣ ಚೀನಾದಲ್ಲಿ ಸರಣಿ ಬಾಂಬ್ ಸ್ಫೋಟಗೊಂಡ ಪರಿಣಾಮ 6 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ...
ಬೀಜಿಂಗ್: ದಕ್ಷಿಣ ಚೀನಾದಲ್ಲಿ ಸರಣಿ ಬಾಂಬ್ ಸ್ಫೋಟಗೊಂಡ ಪರಿಣಾಮ 6 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಚೀನಾದ ಜುವಾಂಗ್ ಝ ಗ್ರಾಮೀಣ ಪ್ರದೇಶದ 15 ಸ್ಥಳಗಳಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ನ್ಯೂಸ್ ಪೇಪರ್ ನಾನ್ ಗುವೋ ಮಾರ್ನಿಂಗ್ ನ್ಯೂಸ್ ವರದಿ ಮಾಡಿದೆ.
ಸರ್ಕಾರಿ ಕಚೇರಿ, ಶಾಪಿಂಗ್ ಸೆಂಟರ್ ಗಳು ಸ್ಫೋಟಕ್ಕೆ ತುತ್ತಾಗಿರುವುದಾಗಿ ವರದಿ ವಿವರಿಸಿದೆ. ಸುಮಾರು ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ರಸ್ತೆಯಲ್ಲಿ ಗ್ಲಾಸ್, ಇಟ್ಟಿಗೆ, ಕಸ ತುಂಬಿಕೊಂಡಿರುವುದಾಗಿ ವರದಿ ಹೇಳಿದೆ. ಘಟನೆ ಬಗ್ಗೆ ಇನ್ನಷ್ಟೇ ಸ್ಪಷ್ಟ ಚಿತ್ರಣ ಹೊರಬೀಳಬೇಕಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.