ಪ್ರಧಾನಿ ಮೋದಿ 
ವಿದೇಶ

ಸೌದಿಯಲ್ಲಿ ಮೋದಿ: ಶೀಘ್ರವೇ ಸರಕು ಮತ್ತು ಸೇವಾ ತೆರಿಗೆ ಜಾರಿ

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಶೀಘ್ರವೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಿಯಾದ್‌: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಶೀಘ್ರವೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಐದು ದಿನಗಳ ವಿದೇಶಿ ಪ್ರವಾಸದ ಕೊನೆಯ ಹಂತದಲ್ಲಿ ಎರಡು ದಿನಗಳ ಸೌದಿ ಅರೇಬಿಯಾ ಭೇಟಿಯಲ್ಲಿರುವ ಪ್ರಧಾನಿ, ಸೌದಿ ಕಂಪೆನಿಗಳ ಸಿಇಒ ಹಾಗೂ ಭಾರತೀಯ ಉದ್ಯಮ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ಜಾಗತಿಕ ಬಂಡವಾಳದಾರರಿಗೆ ಹೂಡಿಕೆ ಸ್ನೇಹಿ ವಾತಾವರಣ ಒದಗಿಸುವ ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ  ರೈಲ್ವೆ, ರಕ್ಷಣೆ ಹಾಗೂ ಇಂಧನ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು.

ಜಿಎಸ್‌ಟಿ ಕುರಿತು ಚಿಂತಿತರಾಗಿದ್ದೀರಿ. ಅದರ ಬಗ್ಗೆ ಚಿಂತೆ ಬೇಡ. ಶೀಘ್ರವೇ ಅದು ಜಾರಿಯಾಗಲಿದೆ. ನಾನು ಗಡುವು ನೀಡಲು ಸಾಧ್ಯವಿಲ್ಲ. ಆದರೆ, ಬಹುಬೇಗ ಅದು ಜಾರಿಗೆ ಬರಲಿದೆ. ಇದು ನಮ್ಮ ಬದ್ಧತೆಯಾಗಿದ್ದು, ಅದು ಜಾರಿ ಹಾದಿಯಲ್ಲಿದೆ’ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೂರ್ವಾನ್ವಯ ತೆರಿಗೆ ಸಂಗ್ರಹ ನಿಟ್ಟಿನಲ್ಲಿ ಕಾಯ್ದೆ ತಿದ್ದುಪಡಿಯು ಇತಿಹಾಸಕ್ಕೆ ಸೇರಿದ ಮಾತು ಎಂದು ಮೋದಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಾಕಿ ಇರುವ ಎರಡು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಅದರ ಕುರಿತು ಏನೂ ಮಾಡಲಾಗದು. ಇದೀಗ, ಪೂರ್ವಾನ್ವಯ ತೆರಿಗೆ ಎಂಬುದು ಭಾರತದಲ್ಲಿ ಭೂತಕಾಲದ ಸಂಗತಿ. ಮುಂದೆನೂ ಅದು ಜಾರಿಯಾಗದು’ ಎಂದು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!