ಪಾಕಿಸ್ತಾನದಲ್ಲಿ ಭೂಕಂಪನದಿಂದ ಭಯಭೀತರಾಗಿ ಓಡಿ ಬಂದ ಜನ (ಚಿತ್ರಕೃಪೆ:ಜಿಯೋ ನ್ಯೂಸ್) 
ವಿದೇಶ

ಪಾಕಿಸ್ತಾನದಲ್ಲಿ 7.1 ತೀವ್ರತೆಯ ಭಾರಿ ಭೂಕಂಪನ

ಪಾಕಿಸ್ತಾನ-ಆಫ್ಘಾನಿಸ್ತಾನ ಗಡಿಯಲ್ಲಿರುವ ಹಿಂದೂ ಖುಷ್ ಪ್ರಾಂತ್ಯದಲ್ಲಿ ಭಾನುವಾರ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ರಷ್ಚು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ...

ಇಸ್ಲಾಮಾಬಾದ್: ಪಾಕಿಸ್ತಾನ-ಆಫ್ಘಾನಿಸ್ತಾನ ಗಡಿಯಲ್ಲಿರುವ ಹಿಂದೂ ಖುಷ್ ಪ್ರಾಂತ್ಯದಲ್ಲಿ ಭಾನುವಾರ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ರಷ್ಚು ತೀವ್ರತೆ ದಾಖಲಾಗಿದೆ  ಎಂದು ತಿಳಿದುಬಂದಿದೆ.

ಪಾಕಿಸ್ತಾನ-ಆಫ್ಘಾನಿಸ್ತಾನ ಗಡಿಯಲ್ಲಿರುವ ಹಿಂದೂ ಖುಷ್ ಪ್ರಾಂತ್ಯದ ಸುಮಾರು 236 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಎಂದು ತಿಳಿದುಬಂದಿದೆ. ಭೂಕಂಪನದ ಪರಿಣಾಮ  ಪಾಕಿಸ್ತಾನ, ಆಫ್ಘಾನಿಸ್ತಾನ ಸೇರಿದಂತೆ ಭಾರತದ ಹಲವು ಭಾಗಗಳಲ್ಲಿಯೂ ಭೂಮಿ ನಡುಗಿದ ಅನುಭವವಾಗಿದೆ. ಪ್ರಮುಖವಾಗಿ ಪಾಕಿಸ್ತಾನದ ಸ್ವಾತ್ ಕಣಿವೆ, ಕೊಹಿಸ್ತಾನ, ಆಸ್ಟರ್, ಚಿತ್ರಾಲ್,  ಅಬೋಟ್ಟಾಬಾದ್, ಲಾಹೋರ್, ಮುಜಾಫರ್ ಬಾದ್, ಪೇಶಾವರ, ರಾಜಧಾನಿ ಇಸ್ಲಾಮಾಬಾದಿನಲ್ಲಿ ಭೂಮಿ ನಡುಗಿದೆ.

ಇನ್ನು ಪಾಕ್ ಆಕ್ರಮಿತ ಕಾಶ್ಮೀರ ಸೇರಿದಂತೆ ಭಾರತ ಜಮ್ಮು ಮತ್ತು ಕಾಶ್ಮೀರ, ದೆಹಲಿ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಸಂಭವಿಸಿದ  15 ಸೆಕೆಂಡ್ ಗಳ ಅಂತರದಲ್ಲಿ ಹಲವು ಬಾರಿ ಭೂಮಿ ನಡುಗಿದೆ. ಭೂಕಂಪನದ ರಭಸಕ್ಕೆ ಲಾಹೋರ್, ಇಸ್ಲಾಮಾಬಾದ್ ಮತ್ತು ಪೇಶಾವರದಲ್ಲಿ ಹಲವು ಕಟ್ಟಡಗಳು ಬಿರುಕು ಬಿಟ್ಟಿದ್ದು,  ಮುಂಜಾಗ್ರತಾ ಕ್ರಮವಾಗಿ ಖೈಬರ್ ಪಕ್ತುಂಕ್ವಾ ಪ್ರಾಂತ್ಯದಲ್ಲಿ ಎಲ್ಲ ಆಸ್ಪತ್ರೆಗಳು ಸಕಲ ರೀತಿಯಲ್ಲಿ ಸಜ್ಜಾಗಿರುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಬ್ಯೂನರ್ ಸಮೀಪ ಭೂಕಂಪನದ ಪರಿಣಾಮ ಸಂಭವಿಸಿದ ಭೂಕುಸಿತದಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಅಲ್ಲದೆ ಭೂಕಂಪನದಿಂದಾಗಿ  ಬ್ಯೂನರ್ ಮತ್ತು ಸ್ವಾತ್ ಕಣಿವೆಯ ಸಂಪರ್ಕ ಕಡಿತಗೊಂಡಿದೆ ಎಂದೂ ಸುದ್ದಿಸಂಸ್ಥೆ ವರದಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!