ಜಮ್ಮು: ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದ್ದು, ಪೂಂಚ್‌ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಿಂದ ಪ್ರಚೋದಿತ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರದ ಪೂಂಚ್ ವಲಯದಲ್ಲಿ ಪಾಕಿಸ್ತಾನದ ಸೇನೆ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ಸೇನೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ತಿಳಿಸಿದ್ದಾರೆ.
ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಗುಂಡು ಹಾರಿಸಿದೆ. ಘಟನೆಯಲ್ಲಿ ಯಾವುದೇ ಹಾನಿ ಬಗ್ಗೆ ಇನ್ನು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.