ವಿದೇಶ

ವಿಮಾನ ನಿಲ್ದಾಣದಲ್ಲಿ ಶಾರುಖ್ ವಿಚಾರಣೆ: ಅಮೆರಿಕ ಅಧಿಕಾರಿಗಳ ಕ್ಷಮೆ ಯಾಚನೆ; ಧನ್ಯವಾದ ಎಂದ ಶಾರುಖ್

Srinivas Rao BV

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಕ್ಕೆ ದಕ್ಣಿಣ ಅಮೆರಿಕದ ಸಹಾಯಕ ಕಾರ್ಯದರ್ಶಿ ನಿಶಾ ಬಿಸ್ವಾಲ್ ಕ್ಷಮೆ ಯಾಚಿಸಿದ್ದಾರೆ.

ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಶಾರುಖ್ ಖಾನ್ ಅವರನ್ನು ವಶಕ್ಕೆ ಪಡೆದು ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಉಂಟಾದ ಗೊಂದಲಕ್ಕೆ ಕ್ಷಮೆ ಯಾಚಿಸುತ್ತೇವೆ ಎಂದು ನಿಶಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಶಾರುಖ್ ಖಾನ್ ಅವರನ್ನು ಅಮೆರಿಕ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ಬಗ್ಗೆ ಶಾರುಖ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದರು. ಶಾರುಖ್ ಖಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರ ಬಗ್ಗೆ ಅಮೆರಿಕದ ಅಧಿಕಾರಿಗಳು ತಕ್ಷಣವೇ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ 2012 ರಲ್ಲೂ ಶಾರುಖ್ ಖಾನ್ ಅವರನ್ನು ಅಮೆರಿಕದ ನ್ಯೂ ಯಾರ್ಕ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.

ಭಾರತದಲ್ಲಿರುವ ಅಮೆರಿಕದಲ್ಲಿರುವ ಭಾರತದ ರಾಯಭಾರಿ ರಿಚ್ ವರ್ಮಾ ಅವರೂ ಸಹ ನಟ ಶಾರುಖ್ ಖಾನ್ ಅವರನ್ನು ವಿಚಾರಣೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಿದ್ದಾರೆ. ಇನ್ನು ಶಾರುಖ್ ಖಾನ್ ಅಮೆರಿಕದಲ್ಲಿರುವ ರಾಯಭಾರಿಗಳ ಕಾಳಜಿಗೆ ಧನ್ಯವಾದ ಹೇಳಿದ್ದಾರೆ.

SCROLL FOR NEXT