ನರೇಂದ್ರ ಮೋದಿ ಮತ್ತು ಸರ್ತಾಜ್ ಅಜೀಜ್ 
ವಿದೇಶ

ಕಾಶ್ಮೀರ ಸಮಸ್ಯೆಯಿಂದ ಜನರ ಗಮನ ಬೇರೆಡೆ ತಿರುಗಿಸಲು ಮೋದಿಯಿಂದ ಬಲೂಚಿಸ್ತಾನ ಹೇಳಿಕೆ: ಪಾಕ್ ವ್ಯಂಗ್ಯ

ಕಣಿವೆ ರಾಜ್ಯ ಕಾಶ್ಮಿರದಲ್ಲಿ ಸಮಸ್ಯೆಯಿಂದ ಜನರ ಗಮನ ಬೇರೆಡೆ ತಿರುಗಿಸುವ ಸಲುವಾಗಿ ಪ್ರಧಾನಿ ಮೋದಿ ಬಲೂಚಿಸ್ತಾನ ವಿಷಯವನ್ನು...

ಇಸ್ಲಮಾಬಾದ್: ಕಣಿವೆ ರಾಜ್ಯ ಕಾಶ್ಮಿರದಲ್ಲಿ ಸಮಸ್ಯೆಯಿಂದ ಜನರ ಗಮನ ಬೇರೆಡೆ ತಿರುಗಿಸುವ ಸಲುವಾಗಿ ಪ್ರಧಾನಿ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

ಭಯೋತ್ಪಾದನೆಗೆ ಪಾಕಿಸ್ತಾನ ಉತ್ತೇಜನ ನೀಡುತ್ತಿದೆ ಎಂದು ಹೇಳುವ ಮೋದಿ ಅದನ್ನು ಸಾಬೀತು ಪಡಿಸಲಿ ಎಂದ್ ಪಾಕಿಸ್ತಾನ ವಿದೇಶ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್, ಬಲೂಚಿಸ್ತಾನದ ಪರಿಸ್ಥಿತಿ ಕಾಶ್ಮೀರದಷ್ಟು ಹದಗೆಟ್ಟಿಲ್ಲ ಎಂದು  ಹೇಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿರುವ ಘೋರ ದುರಂತಗಳಿಂದ ಪ್ರಪಂಚದ ಗಮನವನ್ನು ಬೇರೆಡೆ ತಿರುಗಿಸಲು ಮೋದಿ ಪ್ರಯತ್ನಿಸಿ ಬಲೂಚಿಸ್ತಾನ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ. ಕಳೆದ 5 ವಾರಗಳಿಂದ ಕಾಶ್ಮೀರ ಜನರ ನೆಮ್ಮದಿ ಹಾಳಾಗಿದೆ ಎಂದು ಅವರು ಹೇಳಿದ್ದಾರೆ.

ಬಲೂಚಿಸ್ತಾನ ಪಾಕಿಸ್ತಾನ ಅವಿಭಾಜ್ಯ ಅಂಗ. ಭಾರತ ಪ್ರಮುಖ ಗುಪ್ತಚರ ಇಲಾಖೆಯಾದ 'ರಾ' ಬಲೂಚಿಸ್ತಾನದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್