ಕ್ಯಾಲಿಫೋರ್ನಿಯಾ ಕಾಳ್ಗಿಚ್ಚಿನ ಒಂದು ದೃಶ್ಯ 
ವಿದೇಶ

ಭಾರಿ ಕಾಳ್ಗಿಚ್ಚಿಗೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ 96 ಮನೆಗಳು ನಾಶ

ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಹರಡುತ್ತಿರುವ ಕಾಳ್ಗಿಚ್ಚಿಗೆ ಕನಿಷ್ಠ 96 ಮನೆಗಳು ನಾಶಗೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದೆ.

ಲಾಸೆಂಜಲಿಸ್: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಹರಡುತ್ತಿರುವ ಕಾಳ್ಗಿಚ್ಚಿಗೆ ಕನಿಷ್ಠ 96 ಮನೆಗಳು ನಾಶಗೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದೆ. 
ಶುಕ್ರವಾರದ ಸಂಜೆಯ ವೇಳೆಗೆ 40% ಕಾಳ್ಗಿಚ್ಚನ್ನು ನಿಯಂತ್ರಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. 
ಇಲ್ಲಿಯವರೆಗೂ ಯಾವುದೇ ಸಾವಿನ ವರದಿಯಾಗಿಲ್ಲ ಆದರೆ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಯಾನ್ ಬರ್ನಾರ್ಡಿನೊ ಅಗ್ನಿಶಾಮಕ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. 
"ಎಲ್ಲರ ಸುರಕ್ಷಿತ ರಕ್ಷಣೆಗಾಗಿ ನಮ್ಮ ಸಿಬ್ಬಂದಿ ಇನ್ನೂ ಶ್ರಮವಹಿಸಿದೆ ಮತ್ತು ಇಲ್ಲಿಯವರೆಗೂ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ" ಎಂದು ಅಗ್ನಿ ಶಾಮಕ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಡೇನಿಯಲ್ ಬರ್ಲ್ಯಾಂತ್ ಶುಕ್ರವಾರ ರಾತ್ರಿ ಹೇಳಿದ್ದಾರೆ. 
ಬುಧವಾರದ ಆದೇಶದ ಪ್ರಕಾರ 82 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಕ್ಯಾಲಿಫೋರ್ನಿಯಾ ಬರ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಇದರಿಂದ ಕಾಳ್ಗಿಚ್ಚಿನ ಪರಿಣಾಮ ತೀವ್ರಗೊಂಡಿದೆ. 
ಉತ್ತರ ಕ್ಯಾಲಿಫೋರ್ನಿಯಾದ ಲೇಕ್ ಕಂಟ್ರಿಯಲ್ಲಿ ಕಾಳ್ಗಿಚ್ಚು 4000 ಎಕರೆ ಪ್ರದೇಶದಲ್ಲಿ ಹರಡಿದ್ದು, 175 ಮನೆಗಳನ್ನು ಆಹುತಿ ತೆಗೆದುಕೊಂಡಿದೆ. ಇದನ್ನು 65% ನಿಯಂತ್ರಿಸಲಾಗಿದೆ. 
ಈ ಕಾಳ್ಗಿಚ್ಚಿಗೆ ಯಾರದೋ ಕಿಡಿಗೇಡಿತನ ಕಾರಣ ಎಂದು ತನಿಖೆಯಿಂದ ತಿಳಿಯಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT