ಕಾಬುಲ್: ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿರುವುದನ್ನು ಅಫ್ಘಾನಿಸ್ಥಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯ್ ಪ್ರಶಂಸಿದ್ದಾರೆ.
ಭಾರತ ಅಫ್ಘಾನಿಸ್ಥಾನದಲ್ಲಿ ಪರೋಕ್ಷ ಯುದ್ಧ ಮಾಡುತ್ತಿಲ್ಲ. ಅಫ್ಘಾನಿಸ್ತಾನವನ್ನು ಭಾರತ ಪುನರ್ ನಿರ್ಮಾಣ ಮಾಡುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದ್ದು ತನ್ನ ನೆಲದಿಂದ ಕಾರ್ಯಾಚರಣೆ ಮಾಡಿಸುತ್ತಿದೆ ಎಂದು ಹಮೀದ್ ಕರ್ಜಾಯ್ ಆರೋಪಿಸಿದ್ದಾರೆ.
ಈ ಹಿಂದೆ ಬಲೂಚಿಸ್ಥಾನದ ಹಲವಾರು ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸ್ವಾತಂತ್ರ್ಯ ದಿನಾಚರಣೆಯಂದು ಮಾಡಿದ್ದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿದ್ದರು. ಬಲೂಚಿಸ್ಥಾನದ ಪರಿಸ್ಥಿತಿಯನ್ನು ಉಲ್ಲೇಖಿಸಿ ಅಲ್ಲಿನ ಸ್ವಾತಂತ್ರ್ಯದ ಪರವಾಗಿ ಮಾತನಾಡಿದ್ದ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಬಾಂಗ್ಲಾದೇಶವೂ ಬೆಂಬಲಿಸಿತ್ತು. ಈಗ ಪಾಕಿಸ್ತಾನದ ನೆರೆ ರಾಷ್ಟ್ರ ಅಫ್ಘಾನಿಸ್ಥಾನ ಸಹ ಮೋದಿ ಹೇಳಿಕೆಗೆ ಬೆಂಬಲ ಸೂಚಿಸಿದೆ.