ರೋಮ್: ಇಟಲಿಯ ಕೇಂದ್ರ ಭಾಗದಲ್ಲಿ ಬುಧವಾರ ಘಟಿಸಿದ 6.2 ತೀವ್ರತೆಯ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 247 ಕ್ಕೆ ಏರಿದೆ ಎಂದು ಗುರುವಾರ ಅಧಿಕಾರಿಗಳು ಹೇಳಿದ್ದಾರೆ.
360 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. 4300 ಹೆಚ್ಚು ರಕ್ಷಣಾ ಸಿಬ್ಬಂದಿ ಇವರನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಈ ಭೂಕಂಪನದಿಂದ 1000 ಹೆಚ್ಚು ಜನ ಮನೆಗಳನ್ನು ತೊರೆಯಬೇಕಾಗಿ ಬಂದಿದೆ.