ನವಾಜ್ ಷರೀಫ್ 
ವಿದೇಶ

ಟ್ರಂಪ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಕ್ ಪ್ರಧಾನಿ ನವಾಜ್ ಷರೀಫ್ ಉತ್ಸುಕ

ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲು ತುದಿಗಾಲಲ್ಲಿ ನಿಂತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್...

ಇಸ್ಲಾಮಾಬಾದ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲು ತುದಿಗಾಲಲ್ಲಿ ನಿಂತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಮುಂದಿನ ತಿಂಗಳು ನಡೆಯುವ ಅಮೆರಿಕದ ನೂತನ ಅಧ್ಯಕ್ಷ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿದ್ದಾರೆ ಎಂದು ಸೋಮವಾರ ಮಾಧ್ಯಮಗಳು ವರದಿ ಮಾಡಿವೆ.
ಕಳೆದವಾರಷ್ಟೇ ಡೊನಾಲ್ಡ್ ಟ್ರಂಪ್ ಅವರು ಪಾಕ್ ಪ್ರಧಾನಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಈಗ 2017ರ ಜನವರಿ 20ರಂದು ನಡೆಯುವ ಅಮೆರಿಕ ಅಧ್ಯಕ್ಷರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗದೆ.
ವರದಿಗಳ ಪ್ರಕಾರ, ಷರೀಫ್ ಅವರ ವಿದೇಶಾಂಗ ವ್ಯವಹಾರಗಳ ವಿಶೇಷ ಸಹಾಯಕ ತಾರಿಖ್ ಫತೆಮಿ ಅವರು ಪಾಕ್ ಪ್ರಧಾನಿಯ ಪ್ರವಾಸ ಅಂತಿಮಗೊಳಿಸಲು ಇಂದು ಅಮೆರಿಕಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ.
ಫತೆಮಿ ಅವರು ಸುಮಾರು 10 ದಿನಗಳ ಕಾಲ ವಾಷಿಂಗ್ಟನ್ ನಲ್ಲಿ ತಂಗಲಿದ್ದು, ಈ ವೇಳ ಟ್ರಂಪ್ ಅವರನ್ನು ಭೇಟಿ ಮಾಡಿ, ಅಮೆರಿಕ - ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೆ ಭಯೋತ್ಪಾದನೆಯ ವಿರುದ್ಧ ಪಾಕ್ ಹೋರಾಟವನ್ನು ನಿಯೋಜಿತ ಅಧ್ಯಕ್ಷರಿಗೆ ವಿವರಿಸಲಿದ್ದಾರೆ ಎನ್ನಲಾಗಿದೆ.
ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರ ಮೊದಲ ಬಾರಿಗೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಒಳ್ಳೆಯ ಹೆಸರನ್ನು ಹೊಂದಿದ್ದಾರೆ ಎಂದು ಹೇಳಿರುವುದಾಗಿ ಪಾಕಿಸ್ತಾನ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್