ಹೊಟೆಲ್ ನಲ್ಲಿ ಬೆಂಕಿ 
ವಿದೇಶ

ಪಾಕಿಸ್ತಾನದಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಜೀವ ದಹನ

ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಕರಾಚಿ: ಪಾಕಿಸ್ತಾನದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಕರಾಚಿಯ ಶರಾ ಇ ಫೈಸಲ್ ಪ್ರದೇಶದಲ್ಲಿರುವ ಖಾಸಗಿ ತಾರಾ ಹೊಟೆಲ್ ರೀಜೆಂಟ್ ಪ್ಲಾಜಾದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿ ಇಡೀ ಹೊಟೆಲ್ ಅನ್ನು  ಆವರಿಸಿದೆ ಪರಿಣಾಮ ಹೊಟೆಲ್ ನಲ್ಲಿದ್ದ 11 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಘಟನೆಯಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕರಾಚಿಯ ಜಿನ್ನಾ ಆಸ್ಪತ್ರೆಗೆ  ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರು ವಿದೇಶಿಗರು ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ 15ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಇನ್ನು ಹೊಟೆಲ್ ನಲ್ಲಿ ಬೆಂಕಿಕಾಣಿಸಿಕೊಳ್ಳುತ್ತಿದ್ದಂತೆಯೇ ಹಲವ ವಿದೇಶಿಗರು  ತಮ್ಮತಮ್ಮ ಕೋಣೆಯಲ್ಲಿದ್ದ ಬೆಡ್ ಶೀಟ್ ಗಳನ್ನು ಹಿಡಿದು ಕೊಠಡಿಯ ಕಿಟಕಿಗಳಿಂದ ಕೆಳಗೆ ಧುಮುಕುತ್ತಿರುವ ದೃಶ್ಯ ಪಾಕಿಸ್ತಾನದ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ. ಹೊಟೆಲ್ ನ ಅಡುಗೆ ಕೋಣೆಯಲ್ಲಿ ಮೊದಲು ಬೆಂಕಿ  ಕಾಣಿಸಿಕೊಂಡಿದ್ದು, ಸಮಯ ಕಳೆದಂತೆ ಇಡೀಕಟ್ಟಡವನ್ನು ಬೆಂಕಿ ಆವರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...