ಕುಲಭೂಷಣ್ ಹಾಗೂ ಅಜೀಜ್ (ಸಂಗ್ರಹ ಚಿತ್ರ) 
ವಿದೇಶ

ಕುಲಭೂಷಣ್ ಯಾದವ್ ಕುರಿತ ಅಜೀಜ್ ಹೇಳಿಕೆ "ಸುದ್ದಿ ಸತ್ಯಕ್ಕೆ ದೂರವಾದದ್ದು": ಪಾಕಿಸ್ತಾನ

ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಕುಲಭೂಷಣ್ ಯಾದವ್ ಕುರಿತ ನವಾಜ್ ಷರೀಫ್ ಅವರ ಸಲಹೆಗಾರ ಸರ್ತಾಜ್ ಅಜೀಜ್ ಅವರ ಹೇಳಿಕೆ ಸಂಪೂರ್ಣ ತಪ್ಪು ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಕುಲಭೂಷಣ್ ಯಾದವ್ ಕುರಿತ ನವಾಜ್ ಷರೀಫ್ ಅವರ ಸಲಹೆಗಾರ ಸರ್ತಾಜ್ ಅಜೀಜ್ ಅವರ ಹೇಳಿಕೆ ಕುರಿತ ಸುದ್ದಿ ಸಂಪೂರ್ಣ ತಪ್ಪು ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ.

ನಿನ್ನೆಯಷ್ಟೇ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಸಲಹೆಗಾರ ಸರ್ತಾಜ್ ಅಜೀಜ್ ಅವರು, ಪಾಕಿಸ್ತಾನದ ವಶದಲ್ಲಿರುವ ಕುಲಭೂಷಣ್ ಯಾದವ್ ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದರು ಎಂಬುದರ ಕುರಿತು ಯಾವುದೇ ಪ್ರಬಲ ಸಾಕ್ಷಿ ಲಭ್ಯವಾಗಿಲ್ಲ ಎಂದು ಹೇಳಿದ್ದರು. ಈ ವಿಚಾರ ಪಾಕಿಸ್ತಾನದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ಸರ್ತಾಜ್ ಅಜೀಜ್ ಅವರ ಹೇಳಿಕ ಕುರಿತ ಸುದ್ದಿಗಳು ಸಂಪೂರ್ಣ ತಪ್ಪಾಗಿದ್ದು, ಅವರ ಹೇಳಿಕೆ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದೆ.

ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕುಲಭೂಷಣ್ ಯಾದವ್ ಕುರಿತು ಹೇಳಿಕೆ ನೀಡಿದ್ದ ಸರ್ತಾಜ್ ಅಜೀಜ್ ಅವರು, ಪ್ರಕರಣದ ಸಂಬಂಧ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕುಲಭೂಷಣ್ ಯಾದವ್ ಪಾಕಿಸ್ತಾನದ  ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತು ಅವರ ನೆಟ್ವರ್ಕ್ ಕುರಿತ ತನಿಖೆ ನಡೆಸಲಾಗುತ್ತಿದೆ, ಪ್ರಕರಣ ತನಿಖೆ ಪ್ರಗತಿಯಲ್ಲಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ ಇದನ್ನು ಮಾಧ್ಯಮಗಳು ತಪ್ಪಾಗಿ ಗ್ರಹಿಸಿದ್ದು, ಈ ಕುರಿತ ಸುದ್ದಿಗಳು ಸಂಪೂರ್ಣ ತಪ್ಪು ಎಂದು ಹೇಳಿದೆ. ಅಲ್ಲದೆ ಯಾವುದೇ ರೀತಿಯ ಸಾಕ್ಷ್ಯಾಧಾರಗಳನ್ನು ಬಹಿರಂಗ ಪಡಿಸುವುದಿಲ್ಲ ಎಂದು  ಪಾಕಿಸ್ತಾನ ವಿದೇಶಾಂಗ ಇಲಾಖೆ ಹೇಳಿದೆ. ಅಂತೆಯೇ ಸ್ವತಃ ಕುಲಭೂಷಣ್ ಯಾದವ್ ಅವರು ಕಳೆದ ಮಾರ್ಚ್ ನಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಹೀಗಾಗಿ ಸರ್ತಾಜ್ ಅಜೀಜ್ ಅವರ ಹೇಳಿಕೆ ಕುರಿತ ಸುದ್ದಿ ಸಂಪೂರ್ಣ ತಪ್ಪು ಎಂದು ಹೇಳಿದೆ.

ಕಳೆದ ಮಾರ್ಚ್ ನಲ್ಲಿ ಬಲೂಚಿಸ್ತಾನದ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನ ಪಡೆಗಳು ಅಲ್ಲಿ ಪಾಕ್ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಕುಲಭೂಷಣ್ ಯಾದವ್ ಅವರನ್ನು ಬಂಧಿಸಲಾಗಿತ್ತು. ಪಾಕಿಸ್ತಾನ ಸರ್ಕಾರ  ಹೇಳಿಕೊಂಡಿರುವಂತೆ ಬಂಧನದ ಬಳಿಕ ಸ್ವತಃ ಕುಲಭೂಷಣ್ ಯಾದವ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, 2013ರಿಂದಲೂ ತಾನು ಕರಾಚಿ ಮತ್ತು ಬಲೂಚಿಸ್ತಾನದಲ್ಲಿ ಭಾರತ ಗುಪ್ತಚರ ಇಲಾಖೆ ರಾ ಪರವಾಗಿ ಗೂಢಚರ್ಯೆ ನಡೆಸುತ್ತಿದ್ದೆ  ಎಂದು ಹೇಳಿದ್ದಾನೆ ಎಂದು ಆರೋಪಿಸಿದೆ.

ಆದರೆ ಪಾಕಿಸ್ತಾನದ ಆರೋಪವನ್ನು ನಿರಾಕರಿಸಿರುವ ಭಾರತ ಕುಲಭೂಷಣ್ ಯಾದವ್ ಉದ್ಯಮಿಯೇ ಹೊರತು ಗೂಢಚಾರಿಯಲ್ಲ. ವ್ಯಾಪಾರದ ಉದ್ದೇಶದಿಂದ ಪಾಕಿಸ್ತಾನಕ್ಕೆ ತೆರಳಿದ್ದರು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT