ಕಾಂಗೋದ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಿಲುಕಿ ಇದುವರೆಗೆ ಕನಿಷ್ಠ 50 ಮೃತಪಟ್ಟಿದ್ದಾರೆ ಎಂದು ಪ್ರಾಂತ್ಯೀಯ ಗವರ್ನರ್ ಗುರುವಾರ ಎಎಫ್ ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಕಳೆದ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು 50 ಮಂದಿ ಮೃತಪಟ್ಟಿದ್ದಾರೆ ಎಂದು ಕಾಂಗೋದ ಕೇಂದ್ರಿಯ ಪ್ರಾಂತ್ಯದ ಗವರ್ನರ್ ಜಾಕ್ವೇಸ್ ಎಂಬಡು ಅವರು ಹೇಳಿದ್ದಾರೆ. ಅಲ್ಲದೆ ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದಿದ್ದಾರೆ.