ಅಜೀಜ್ ಚೌಧರಿ 
ವಿದೇಶ

ಮಾತುಕತೆ ಭಯೋತ್ಪಾದನೆ ನಿರ್ಮೂಲನೆಗೆ ಇರುವ ಪರಿಣಾಮಕಾರಿ ಹಾದಿ: ಅಜೀಜ್ ಚೌಧರಿ

ಭಯೋತ್ಪಾದನೆ ವಿರುದ್ಧ ಹೋರಾಡಲು ಇರುವ ಪರಿಣಾಮಕಾರಿ ಮಾರ್ಗವೆಂದರೆ ಅದು ದ್ವಿಪಕ್ಷೀಯ ಮಾತುಕತೆ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ ಅಭಿಪ್ರಾಯಪಟ್ಟಿದ್ದಾರೆ.

ಮಾಸ್ಕೋ: ಭಯೋತ್ಪಾದನೆ ವಿರುದ್ಧ ಹೋರಾಡಲು ಇರುವ ಪರಿಣಾಮಕಾರಿ ಮಾರ್ಗವೆಂದರೆ ಅದು ದ್ವಿಪಕ್ಷೀಯ ಮಾತುಕತೆ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ ಅಭಿಪ್ರಾಯಪಟ್ಟಿದ್ದಾರೆ. 
ಉಗ್ರವಾದವನ್ನು ನಿರ್ಮೂಲನೆ ಮಾಡಲು ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯೊಂದೇ ಪರಿಣಾಮಕಾರಿ ಹಾದಿ ಎಂದು ಪಾಕಿಸ್ತಾನ ನಂಬಿದೆ ಎಂದು ಚೌಧರಿ ಹೇಳಿದ್ದಾರೆ. ಪಾಕಿಸ್ತಾನ-ಭಾರತದ ನಡುವಿನ ಸಂಬಂಧ ಹದಗೆಡಲು ದ್ವಿಪಕ್ಷೀಯ ಮಾತುಕತೆ ನಡೆಯದೇ ಇರುವುದೇ ಪ್ರಮುಖ ಕಾರಣವಾಗಿದ್ದು, ಪರಸ್ಪರ ತಪ್ಪು ಗ್ರಹಿಕೆಯೂ ಸಹ ಕಾರಣವಾಗಿದೆ ಎಂದು ಹೇಳಿದ್ದಾರೆ. ನಮ್ಮ ನಾಯಕತ್ವ ಈಗಿನ ಪರಿಸ್ಥಿತಿಯನ್ನು ಬಯಸುತ್ತಿಲ್ಲ, ಭಯೋತ್ಪಾದನೆ ಸೇರಿದಂತೆ ಸಮಸ್ಯೆಗಳು ಎಷ್ಟೇ ಜಟಿಲವಾಗಿದ್ದರೂ ಅದನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಅಜೀಜ್ ಚೌಧರಿ ರಷ್ಯಾ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. 
ಗಡಿ ನಿಯಂತ್ರಣ ರೇಖೆಯಲ್ಲಿ ಇತ್ತೀಚೆಗೆ ನಡೆದ ಗುಂಡಿನ ಚಕಮಕಿ ಕಾರ್ಯತಂತ್ರದ ಭಾಗವಾಗಿ ತಪ್ಪು ಲೆಕ್ಕಾಚಾರಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ದಟ್ಟವಾಗಿದೆ ಎಂದಿರುವ ಚೌಧರಿ, ಇಂತಹ ಸಂದರ್ಭಗಳಲ್ಲಿ ಭಾರತ-ಪಾಕಿಸ್ತಾನಕ್ಕಾಗಿ ಇರುವ ವಿಶ್ವಸಂಸ್ಥೆ ವೀಕ್ಷಕ ತಂಡ ಪ್ರಮುಖ ಪಾತ್ರ ವಹಿಸುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!