ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ
ವಾಷಿಂಗ್ ಟನ್: 2016 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪ ಎದುರಿಸುತ್ತಿರುವ ರಷ್ಯಾ ವಿರುದ್ಧ ನಿರ್ಬಂಧ ಹೇರಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ಚಿಂತನೆ ನಡೆಸಿದೆ.
ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದ ಹಿಲರಿ ಕ್ಲಿಂಟನ್ ಇ-ಮೇಲ್ ಹ್ಯಾಕ್ ಮಾಡಿ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಮೂಲಕ ರಷ್ಯಾ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಗೆಲುವಿಗೆ ಸಹಕಾರ ನೀಡಿತ್ತು ಎಂಬ ಆರೋಪ ಇತ್ತೀಚೆಗೆ ವ್ಯಾಪಕವಾಗಿ ಕೇಳಿಬಂದಿತ್ತು.
ಸಿಬಿಎಸ್ ನ್ಯೂಸ್ ಹಾಗೂ ಸಿಎನ್ಎನ್ ವರದಿಯ ಪ್ರಕಾರ ರಷ್ಯಾ ಗುಪ್ತಚರ ಇಲಾಖೆ ಹಾಗೂ ಅಲ್ಲಿನ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ಅಮೆರಿಕ ರಷ್ಯಾ ವಿರುದ್ಧ ನಿರ್ಬಂಧ ಹೇರುವ ಆಯ್ಕೆಯನ್ನು ಪರಿಗಣಿಸಿದೆ ಎಂದು ತಿಳಿದುಬಂದಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬೆಂಬಲದಿಂದ ರಷ್ಯಾದ ಗುಪ್ತಚರ ಇಲಾಖೆ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದ ಹಿಲರಿ ಕ್ಲಿಂಟನ್ ಇ-ಮೇಲ್ ಗಳನ್ನುಹ್ಯಾಕ್ ಮಾಡುವ ಮೂಲಕ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಸಿಐಎ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.