ವಾಷಿಂಗ್ ಟನ್: ನವೆಂಬರ್ ನಲ್ಲಿ ಅಂತ್ಯಗೊಂಡ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಮಾಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ರಷ್ಯಾದ 35 ರಾಜತಾಂತ್ರಿಕ ಅಧಿಕಾರಿಗಳನ್ನು ವಜಾಗೊಳಿಸಿದೆ.
ಡೊನಾಲ್ಡ್ ಟ್ರಂಪ್ ಗೆಲುವಿಗೆ ಸಹಕಾರಿಯಾಗುವಂತೆ ಅಮೆರಿಕದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದ ಹಿಲರಿ ಕ್ಲಿಂಟನ್ ಅವರ ಇ-ಮೇಲ್ ಗಳನ್ನು ರಷ್ಯಾ ಗುಪ್ತಚರ ಇಲಾಖೆ ಅಧಿಕಾರಿಗಳು ಹ್ಯಾಕ್ ಮಾಡಿದ್ದರು ಎಂದು ಅಮೆರಿಕ ಗುಪ್ತಚರ ಸಂಸ್ಥೆ ಸಿಐಎ ಗಂಭೀರ ಆರೋಪ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಷ್ಯಾ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಎಚ್ಚರಿಕೆ ನೀಡಿದ್ದರು.
ಸಿಐಎ ರಷ್ಯಾ ವಿರುದ್ಧ ಮಾಡಿದ್ದ ಆರೋಪಗಳನ್ನು ಸ್ವತಃ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸಹ ಒಪ್ಪಿದ್ದರು. ಈಗ ರಷ್ಯಾ ವಿರುದ್ಧದ ಕ್ರಮದ ಭಾಗವಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ರಷ್ಯಾದ ರಾಜತಾಂಟ್ರಿಕ ಅಧಿಕಾರಿಗಳನ್ನು ವಜಾ ಮಾಡಿದೆ.