ಜೈಪುರ: ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನ ಮುಂದಾದರೆ, ಭಾರತ ಬೆಂಬಲಕ್ಕೆ ನಿಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.
ಭಾರತದಲ್ಲಿ ನಡೆದಿರುವ ಬಹುತೇಕ ಉಗ್ರರ ದಾಳಿಗಳು ಪಾಕಿಸ್ತಾನದಲ್ಲಿ ಹುಟ್ಟಿಕೊಂಡಿರುವ ಉಗ್ರ ಸಂಘಟನೆಯದ್ದಾಗಿದೆ. ಹಾಗಾಗಿ, ಪಾಕಿಸ್ತಾನವೇ ಉಗ್ರರನ್ನು ಮಟ್ಟ ಹಾಕಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿ ನಡೆದಿರುವ ಹೆಚ್ಚಿನ ಉಗ್ರರ ದಾಳಿಗಳಿಗೆ ಪಾಕಿಸ್ತಾನವೇ ಕಾರಣವಾಗಿದೆ. ಇದರಿಂದ ಉಭಯ ದೇಶಗಳ ಸಂಬಂಧ ಹದಗೆಡುತ್ತಿದೆ ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮುಂದಾದರೆ ಭಾರತ ಸರ್ಕಾರ ಸರ್ವ ರೀತಿಯಲ್ಲಿ ಬೆಂಬಲಿಸುತ್ತದೆ ಎಂದ ಅವರು, ಇದರಿಂದ ಉಭಯ ದೇಶಗಳ ಸಂಬಂಧಗಳು ಸುಧಾರಿಸುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ನೆಲದಲ್ಲಿರುವ ಉಗ್ರ ಸಂಘಟನೆಗಳು ಸಂಚು ರೂಪಿಸುತ್ತಿವೆ. ಇಂತಹ ಸಂಘಟನೆಗಳ ವಿರುದ್ಧ ಕಠಿಣ ಕ್ರಮವನ್ನು ಪಾಕ್ ಸರ್ಕಾರ ಕೈಗೊಳ್ಳಬೇಕು . ಉಗ್ರರನ್ನು ಮಟ್ಟಹಾಕಲು ನಿರ್ಣಾಯಕ ಕ್ರಮ ತೆಗೆದುಕೊಂಡಲ್ಲಿ ಭಾರತವು ಪಾಕಿಸ್ತಾನದ ಜೊತೆಗೆ ನಿಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics