ವಿಶ್ವಸಂಸ್ಥೆ ಹೇರಿದ್ದ ನಿರ್ಬಂಧ ಮೀರಿ ರಾಕೆಟ್ ಉಡಾವಣೆ ಮಾಡಿದ ಉತ್ತರ ಕೊರಿಯಾ
ವಿಶ್ವಸಂಸ್ಥೆ ಹೇರಿರುವ ನಿರ್ಬಂಧವನ್ನು ಮೀರಿ ದೂರಗಾಮಿ ರಾಕೆಟ್ ನ್ನು ಉತ್ತರ ಕೊರಿಯಾ ಉಡಾವಣೆ ಮಾಡಿದೆ...
ಸೋಲ್: ವಿಶ್ವಸಂಸ್ಥೆ ಹೇರಿರುವ ನಿರ್ಬಂಧವನ್ನು ಮೀರಿ ದೂರಗಾಮಿ ರಾಕೆಟ್ ನ್ನು ಉತ್ತರ ಕೊರಿಯಾ ಉಡಾವಣೆ ಮಾಡಿದೆ.
ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಅಣ್ವಸ್ತ್ರ ಪ್ರಯೋಗ ನಡೆಸದಂತೆ ಉತ್ತರ ಕೊರಿಯಾಗೆ ಎಚ್ಚರಿಕೆ ನೀಡಿತ್ತು. ಇದೆಲ್ಲವನ್ನು ಮೀರಿ ಉತ್ತರ ಕೊರಿಯಾ ರಾಕೆಟ್ ಉಡಾವಣೆ ಮಾಡಿ ಈ ಕಾರ್ಯದಲ್ಲಿ ಸಂಪೂರ್ಣ ಯಶಸ್ಸು ಪಡೆದಿರುವುದಾಗಿ ಹೇಳಿಕೊಂಡಿದೆ.
ನಿರ್ಬಂಧ ಮೀರಿ ಉತ್ತರ ಕೊರಿಯಾ ದೂರಗಾಮಿ ರಾಕೆಟ್ ಉಡಾವಣೆ ಮಾಡಿರುವುದನ್ನು ಅಮೆರಿಕ, ದಕ್ಷಿಣ ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳು ಖಂಡಿಸಿವೆ.
ಉತ್ತರ ಕೊರಿಯಾ ಜನವರಿ 6ರಂದು ಜಲಜನಕ ಬಾಂಬ್ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆ ಕೂಡ ವಿಶ್ವ ಸಮುದಾಯದ ಟೀಕೆಗೆ ಗುರಿಯಾಗಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.