ಆಫ್ಘನಿಸ್ತಾನದಲ್ಲಿ ಆತ್ಮಾಹುತಿ ದಾಳಿ, 3 ಸೈನಿಕರ ಸಾವು
ಆಫ್ಘಾನಿಸ್ತಾನದ ಬಾಲ್ಖಾ ಪ್ರಾಂತ್ಯದಲ್ಲಿನ ಮಝುರ್ ಇ ಷರೀಫ್ನಲ್ಲಿರುವ ರಾಷ್ಟ್ರೀಯ ಆರ್ಮಿ ಕೇಂದ್ರ ಬಳಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು ಘಟನೆಯಲ್ಲಿ ಮೂವರು...
ಕಾಬೂಲ್: ಆಫ್ಘಾನಿಸ್ತಾನದ ಬಾಲ್ಖಾ ಪ್ರಾಂತ್ಯದಲ್ಲಿನ ಮಝುರ್ ಇ ಷರೀಫ್ನಲ್ಲಿರುವ ರಾಷ್ಟ್ರೀಯ ಆರ್ಮಿ ಕೇಂದ್ರ ಬಳಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು ಘಟನೆಯಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಸೇನಾ ಬಸ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದ್ದು, ಘಟನೆಯಲ್ಲಿ ಸುಮಾರು 18 ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಕ್ತಾರ ಮುನೀರ್ ಅಹ್ಮದ್ ಪರ್ಹಾದ್ ಹೇಳಿದ್ದಾರೆ.
ಆಫ್ಘನಿಸ್ತಾನ್ ಸೇನಾ ಕೇಂದ್ರವನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಈಗಾಗಲೇ ತಾಲಿಬಾನ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಇತ್ತೀಚೆಗೆ ಆಪ್ಘನ್ ನಲ್ಲಿ ತಾಲಿಬಾನ್ ಉಗ್ರರ ದಾಳಿ ಹೆಚ್ಚಿದ್ದು, ನೂರಾರು ಮಂದಿ ಅಮಾಯಕರು ಉಗ್ರರಿಗೆ ಬಲಿಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.