ಸಂಗ್ರಹ ಚಿತ್ರ 
ವಿದೇಶ

ಬುರುಂಡಿಯಲ್ಲಿ ಗ್ರೆನೇಡ್ ದಾಳಿ; 26 ಮಂದಿಗೆ ಗಾಯ

ಅಫ್ರಿಕಾ ಖಂಡದ ಬುರುಂಡಿಯಲ್ಲಿ ಪ್ರತ್ಯೇಕತಾವಾದಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 26 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ...

ಬುಜುಂಬುರಾ: ಅಫ್ರಿಕಾ ಖಂಡದ ಬುರುಂಡಿಯಲ್ಲಿ ಪ್ರತ್ಯೇಕತಾವಾದಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 26 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬುರುಂಡಿಯ ಬುಜುಂಬುರಾದಲ್ಲಿ ಈ ದಾಳಿ ನಡೆಸಲಾಗಿದ್ದು, 26 ಮಂದಿಯ ಪೈಕಿ 9 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಬುರುಂಡಿಯನ್ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ  ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಜನವಸತಿ ಪ್ರದೇಶದ ಮೇಲೆ ಗ್ರೆನೇಡ್ ಗಳನ್ನು ಎಸೆದ ಪರಿಣಾಮ 26 ಮಂದಿ ಗಾಯಗೊಂಡಿದ್ದಾರೆ.

ಇದಕ್ಕೂ ಮೊದಲು ಗುರುವಾರ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಸಿಬ್ಬಂದಿಗಳು ಮಟಕುರಾದಲ್ಲಿರುವ ಉಗ್ರರ ಅಡಗುದಾಣ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಎಕೆ 47 ಸರಣಿಯ ಬಂದೂಕುಗಳು, 2 ಬಾಂಬ್  ಗಳು ಮತ್ತು ಹಲವು ಬುಲೆಟ್ ಮ್ಯಾಗಜಿನ್ ಗಳನ್ನು ವಶಪಡಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಉಗ್ರರು ದಾಳಿ ನಡೆಸಿದ್ದಾರೆ.

ಬುರುಂಡಿಯನ್ ಅಧ್ಯಕ್ಷ ಪಿಯರೆ ಕುರುಂಜಿಜಾ ಅವರ ಮೂರನೇ ಬಾರಿಯ ಅಧಿಕಾರ ಸ್ವೀಕಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. 2015ರ ಏಪ್ರಿಲ್ ನಿಂದಲೂ ಇದೇ ವಿಚಾರವಾಗಿ ಬುರುಂಡಿಯಲ್ಲಿ ಹಲವು  ಹಿಸಾಂತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಇದಕ್ಕೆ ಸ್ಥಳೀಯ ಪ್ರತ್ಯೇಕತಾವಾದಿಗಳು ಕೂಡ ಕೈಜೋಡಿಸಿದ್ದಾರೆ. 2015 ಜುಲೈ ತಿಂಗಳಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ  ಹಿಂಸಾಚಾರ ಘಟನೆಯಲ್ಲಿ ಈವರೆಗೂ ಸುಮಾರು 400 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ