ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತು ಸೇನಾಪಡೆ (ಸಂಗ್ರಹ ಚಿತ್ರ) 
ವಿದೇಶ

ದ.ಕೊರಿಯಾ ಮೇಲೆ ದಾಳಿಗೆ ಕಿಮ್ ಸಂಚು?

ದಕ್ಷಿಣ ಕೊರಿಯಾ ಮೇಲೆ ದಾಳಿ ನಡೆಸಲು ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಂಚು ರೂಪಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಸಿಯೋಲ್: ದಕ್ಷಿಣ ಕೊರಿಯಾ ಮೇಲೆ ದಾಳಿ ನಡೆಸಲು ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಂಚು ರೂಪಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಗುಪ್ತಚರ ಇಲಾಖೆಯ  ಮೂಲಗಳು ತಿಳಿಸಿವೆ.

ದಕ್ಷಿಣ ಕೊರಿಯಾದಲ್ಲಿರುವ ಉತ್ತರ ಕೊರಿಯಾ ವಿರೋಧಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂತೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆದೇಶ  ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ದಕ್ಷಿಣ ಕೊರಿಯಾದ ಗುಪ್ತಚರ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಭಯೋತ್ಪಾದಕ ದಾಳಿ ಮಾದರಿಯಲ್ಲಿ ಸಂಚು ರೂಪಿಸಲಾಗುತ್ತಿದೆ.  ಈ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ತನ್ನ ಅಣ್ವಸ್ತ್ರ ಕ್ಷಿಪಣಿಗಳ ಪ್ರಯೋಗ ನಡೆಸಿ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇದೀಗ ದಕ್ಷಿಣ ಕೊರಿಯಾ ಮೇಲೆ ದಾಳಿ  ನಡೆಸಲು ಸಿದ್ಧತೆ ಆರಂಭಿಸಿರುವುದು ವಿಶ್ವ ಸಮುದಾಯದ ಆತಂಕಕ್ಕೆ ಕಾರಣವಾಗಿದೆ. ಉತ್ತರ ಕೊರಿಯಾದ ಕ್ಷಿಪಣಿ ಪರೀಕ್ಷೆಯ ನಂತರ ಎರಡೂ ದೇಶಗಳ ಮಧ್ಯೆ ಬಿಗುವಿನ ಪರಿಸ್ಥಿತಿ  ನಿರ್ಮಾಣವಾಗಿದ್ದು, ಸೇನಾಪಡೆಗಳಿಗೆ ಯುದ್ಧಕ್ಕೆ ಸಿದ್ಧತೆ ನಡೆಸುವಂತೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಉತ್ತರ ಕೊರಿಯಾ ಗುಪ್ತಚರ ಇಲಾಖೆ ದೇಶದ ಸೇನಾ ಸಾಮರ್ಥ್ಯದ ಬಗ್ಗೆ ವಿಶ್ಲೇಷಣೆ ನಡೆಸಲು ಆರಂಭಿಸಿದ್ದು, ದಕ್ಷಿಣ ಕೊರಿಯಾದ ಬಲಾಬಲವನ್ನು ಲೆಕ್ಕಹಾಕುತ್ತಿವೆ. ಏತನ್ಮಧ್ಯೆ  ಉತ್ತರ ಕೊರಿಯಾ ವಿಶ್ವ ಸಮುದಾಯದ ವಿರೋಧದ ನಡುವೆಯೂ ಕ್ಷಿಪಣಿ ಪರೀಕ್ಷೆ ನಡೆಸಿದ ಬಳಿಕ ಅಮೆರಿಕದ ಯುದ್ಧ ವಿಮಾನಗಳು ದಕ್ಷಿಣ ಕೊರಿಯಾಗೆ ಬೆಂಬಲ ಸೂಚಕವಾಗಿ ಜಪಾನ್  ಹಾಗೂ ದಕ್ಷಿಣ ಕೊರಿಯಾದಲ್ಲಿ ಹಾರಾಡಿವೆ. ಇದು ಈ ಪ್ರಾಂತ್ಯದಲ್ಲಿ ಯುದ್ಧ ಸನ್ನಿವೇಶ ನಿರ್ಮಾಣ ಮಾಡಿದೆ.

ಇನ್ನು ಸಂಭಾವ್ಯ ಯುದ್ಧ ಕುರಿತಂತೆ ಚರ್ಚಿಸಲು ದಕ್ಷಿಣ ಕೊರಿಯಾದ ಆಡಳಿತಾರೂಢ ಸಾನುರಿ ಪಕ್ಷದ ಸದಸ್ಯರು ಗುರುವಾರ ಸಭೆ ಸೇರಿ ಚರ್ಚಿಸಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!