ವಾಷಿಂಗ್ ಟನ್: ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡುವ ಕ್ರಮವನ್ನು ಅಮೆರಿಕದ ರಾಜ್ಯ ಇಲಾಖೆ ಸಮರ್ಥಿಸಿಕೊಂಡಿದೆ.
ಅಮೆರಿಕ ಪಾಕಿಸ್ತಾನಕ್ಕೆ ಪೂರೈಕೆ ಮಾಡಲಿರುವ ಎಫ್-16 ಯುದ್ಧ ವಿಮಾನಗಳು ಭಯೋತ್ಪಾದಕ ವಿರುದ್ಧ ನಡೆಯುವ ಕಾರ್ಯಾಚರಣೆಗೆ ನೆರವಾಗಲಿದೆ, ಆದ್ದರಿಂದ ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲು ಅಮೆರಿಕ ಸಿದ್ಧವಿದೆ ಎಂದು ಅಮೆರಿಕ ವಕ್ತಾರೆ ಹೆಲೇನಾ ವೈಟ್ ಸ್ಪಷ್ಟಪಡಿಸಿದ್ದಾರೆ.
ಈ ವರೆಗೂ ಪಾಕಿಸ್ತಾನದ ಬಳಿ ಇರುವ ಎಫ್-16 ಯುದ್ಧ ವಿಮಾನಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಬಳಕೆಯಾಗಿದೆ. ಅಮೆರಿಕ ನೀಡುವ ಎಫ್-16 ಯುದ್ಧ ವಿಮಾನಗಳು ಸಹ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ಬಳಕೆಯಾಗಲಿವೆ ಎಂದು ಅಮೆರಿಕ ವಿಶ್ವಾಸ ವ್ಯಕ್ತಪಡಿಸಿದೆ.
ಪಾಕಿಸ್ತಾನಕ್ಕೆ ಪೂರೈಕೆಯಾಗುವ ಎಫ್-16 ಯುದ್ಧ ವಿಮಾನಗಳು ಭಾರತದ ವಿರುದ್ಧ ಬಳಕೆಯಾಗುವ ಸಾಧ್ಯತೆ ಇರುವುದರಿಂದ ಅಮೆರಿಕದ ಪ್ರಸ್ತಾವನೆಗೆ ಭಾರತ ಹಾಗೂ ಅಮೆರಿಕಾದ ಹಲವು ಸಂಸದರು ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಅಮೆರಿಕ ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡುವ ಅಮೆರಿಕ ಸರ್ಕಾರದ ಕ್ರಮವನ್ನು ಅಮೆರಿಕಾದಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಸ್ವಾಗತಿಸಿದೆ.