ಪಾಕ್ ಪೊಲೀಸರ ಕಸ್ಟಡಿಯಲ್ಲಿರುವ ಮೌಲಾನಾ ಮಸೂದ್ ಅಜರ್ 
ವಿದೇಶ

ಮೌಲಾನಾ ಮಸೂದ್ ಅಜರ್ ನಮ್ಮ ಕಸ್ಟಡಿಯಲ್ಲಿದ್ದಾನೆ: ಪಾಕ್ ಸಚಿವರು

ಪಠಾಣ್ ಕೋಟ್ ವಾಯುನೆಲೆ ಮೇಲೆ ಬಾಂಬ್ ದಾಳಿ ನಡೆಸಿದ ಜೈಶೆ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು...

ಇಸ್ಲಾಮಾಬಾದ್ : ಪಠಾಣ್ ಕೋಟ್ ವಾಯುನೆಲೆ ಮೇಲೆ ಬಾಂಬ್ ದಾಳಿ ನಡೆಸಿದ ಜೈಶೆ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು ಆತನ ಸಹಚರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನದ ಸಚಿವರೊಬ್ಬರು ತಿಳಿಸಿದ್ದಾರೆ.

ಮೌಲಾನಾ ಮತ್ತು ಅವನ ಅನುಯಾಯಿಗಳನ್ನು ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಕಾನೂನು ಸಚಿವ ರಾಣಾ ಸನೌಲ್ಲ ಡಾನ್ ನ್ಯೂಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಪಠಾಣ್ ಕೋಟ್ ದಾಳಿಯಲ್ಲಿ ಮೌಲಾನಾ ಪಾತ್ರ ಇರುವುದು ದೃಢಪಟ್ಟರೆ ಅವನನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ.

ಮೌಲಾನಾನನ್ನು ಅವನ ಕೆಲವು ಸ್ನೇಹಿತರು ಮತ್ತು ಸಂಬಂಧಿಗಳೊಂದಿಗೆ ಸೆರೆಹಿಡಿಯಲಾಗಿದೆ ಎಂದು ಎರಡು ದಿನಗಳ ಹಿಂದೆಯೇ ಪಾಕಿಸ್ತಾನ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ವಿದೇಶಾಂಗ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್, ನಮಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದ್ದರು. ಪಾಕಿಸ್ತಾನದ ವಿದೇಶಾಂಗ ಇಲಾಖೆ ಕೂಡ ನಿನ್ನೆ ಇದೇ ಮಾಹಿತಿ ನೀಡಿತ್ತು.ಆದರೆ ಈಗ ಪಾಕಿಸ್ತಾನ ಸರ್ಕಾರವೇ ಮೌಲಾನಾ ವಶದ ವಿಷಯವನ್ನು ದೃಢಪಡಿಸಿದೆ.

ಮೊನ್ನೆ ಜನವರಿ 2ರಂದು ಪಠಾಣ್ ಕೋಟ್ ಮೇಲೆ ನಡೆದ ದಾಳಿಯ ರೂವಾರಿ ಮೌಲಾನಾ ಅಜರ್, ಆತನ ಸಹೋದರ ರೌಫ್ ಮತ್ತು ಇತರ ಐವರು ಎಂದು ಭಾರತ ಪ್ರತಿಪಾದಿಸುತ್ತಾ ಬಂದಿತ್ತು. ಇದಕ್ಕೆ ಸಾಕ್ಷಿಯಾಗಿ ಪಾಕಿಸ್ತಾನ ಗಡಿ ದಾಟಿ ಬಂದ ಆರು ಮಂದಿ ಭಯೋತ್ಪಾದಕರು ದೂರವಾಣಿ ಕರೆ ಮಾಡಿದ್ದು, ಅವರು ಪಠಾಣ್ ಕೋಟ್ ವಾಯುನೆಲೆಯಲ್ಲಿ ಬಂದೂಕು ಹಾರಿಸಿದ ಸಾಕ್ಷಿಗಳಿದ್ದವು. ಭಯೋತ್ಪಾದಕರು ಮೌಲಾನಾ ಜೊತೆ ಸಂಪರ್ಕದಲ್ಲಿದ್ದರು ಎಂದು ಭಾರತ ಹೇಳಿತ್ತು.

ಮೊನ್ನೆ ಬುಧವಾರ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿಕೆ ನೀಡಿ, ಜೈಶೆಗೆ ಸೇರಿದ ಹಲವು ಮಂದಿ ಉಗ್ರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅವರ ಕಚೇರಿಗಳಿಗೆ ಬೀಗಮುದ್ರೆ ಹಾಕಲಾಗಿದೆ ಎಂದು ಪ್ರಕಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT