ಅಫ್ಘನ್ ನ ರಷ್ಯಾ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಪೋಟ, 12ಕ್ಕೂ ಹೆಚ್ಚು ಸಾವು
ಅಫ್ಘಾನಿಸ್ತಾನದಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಬುಧವಾರ ಆತ್ಮಹುತಿ ಕಾರ್ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ
ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಬುಧವಾರ ಆತ್ಮಹುತಿ ಕಾರ್ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಅಫ್ಘನ್ ರಾಜಧಾನಿ ಕಾಬೂಲ್ನ ಪಾರ್ಲಿಮೆಂಟ್ ರಸ್ತೆಯಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಆತ್ಮಾಹುತಿ ಬಾಂಬರ್ ಒಬ್ಬ ತನ್ನ ಕಾರನ್ನು ಸ್ಪೋಟಿಸಿಕೊಂಡಿದ್ದಾನೆ.
ಪಾಕಿಸ್ತಾನದ ಬಚಾಖಾನ್ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಬಾಂಬ್ ದಾಳಿಯ ಬೆನ್ನಿಗೆ ಇದೀಗ ಆಫ್ಘಾನಿಸ್ತಾನದಲ್ಲೂ ಬಾಂಬ್ ಸದ್ದು ಮೊಳಗಿದೆ. ಆದರೆ ಈ ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.