ಗಿಜಾ ಪಿರಮಿಡ್ ಪ್ರದೇಶದಲ್ಲಿ ಬಾಂಬ್ ಸ್ಫೋಟ 
ವಿದೇಶ

ಈಜಿಪ್ಟ್​ನ ಪ್ರಸಿದ್ಧ ಗಿಜಾ ಪಿರಮಿಡ್ ಪ್ರದೇಶದಲ್ಲಿ ಬಾಂಬ್ ಸ್ಪೋಟ, 10 ಸಾವು

ಈಜಿಪ್ಟ್​ನ ಗಿಜಾ ಪ್ರಾಂತ್ಯದ ಅಪಾರ್ಟ್ ಮೆಂಟ್ ವೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡ ವೇಳೆ ಬಾಂಬ್ ಸ್ಫೋಟದಲ್ಲಿ...

ಕೈರೋ: ಈಜಿಪ್ಟ್​ನ ಗಿಜಾ ಪ್ರಾಂತ್ಯದ ಅಪಾರ್ಟ್ ಮೆಂಟ್ ವೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡ ವೇಳೆ ಬಾಂಬ್ ಸ್ಫೋಟದಲ್ಲಿ 7 ಮಂದಿ ಪೊಲೀಸರು ಸೇರಿ 10 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.

2011ರ ಕ್ರಾಂತಿಯ ವಾರ್ಷಿಕೋತ್ಸವಕ್ಕೆ ಇನ್ನು ಒಂದು ವಾರವಿರುವಂತೆ ಅಲ್-ಹರಾಮ್ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದೆ.

ಪದಚ್ಯುತ ಅಧ್ಯಕ್ಷ ಮೊಹಮದ್ ಮೊರ್ಸಿ ಅವರ ಇಸ್ಲಾಮಿಕ್ ಮುಸ್ಲಿಂ ಬ್ರದರ್​ಹುಡ್ ಬಾಂಬ್ ಸ್ಪೋಟಕ್ಕೆ ಕಾರಣ ಎಂದು ಈಜಿಪ್ಟ್ ಸರ್ಕಾರ ಹೇಳಿದೆ.

ಮುಂದಿನ ದಿನಗಳಲ್ಲಿ ದುಷ್ಕೃತ್ಯಗಳನ್ನು ಎಸಗಲು ಸಜ್ಜಾಗಿದ್ದ ಇಸ್ಲಾಮಿಸ್ಟ್ ಮುಸ್ಲಿಂ ಬ್ರದರ್​ಹುಡ್​ನ ಸದಸ್ಯರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!