ಸಾಂದರ್ಭಿಕ ಚಿತ್ರ 
ವಿದೇಶ

ಫೆಬ್ರವರಿಯಲ್ಲಿ ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ?

ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳು ಮಾತುಕತೆ ನಡೆಸುವ...

ನವದೆಹಲಿ: ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳು ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸ್ಥಗಿತಗೊಂಡಿರುವ ಉಭಯ ರಾಷ್ಟ್ರಗಳ ಮಾತುಕತೆಯನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದ್ದು, ಇಸ್ಲಾಮಾಬಾದ್ ನಲ್ಲಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಪಾಕಿಸ್ತಾನದಲ್ಲಿನ ಭಾರತದ ನೂತನ ರಾಯಭಾರಿ ಗೌತಮ ಬಂಬವಾಲೆ ಅವರು ಪ್ರಧಾನಿ ನವಾಜ್ ಷರೀಫ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ನಸೀರ್ ಖಾನ್ ಜಂಜುವಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌. ಜೈಶಂಕರ್‌ ಹಾಗೂ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಎಜಾಜ್‌ ಅಹಮದ್‌ ಚೌಧರಿ ನಡುವೆ ಮಾತುಕತೆ ನಡೆಯಲಿದೆ.
ಜನವರಿಯಲ್ಲಿ ನಡೆಯಬೇಕಿದ್ದ ಈ ಮಾತುಕತೆ ಪಂಜಾಬ್‌ನ ಪಠಾಣ್‌ಕೋಟ್‌ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಅಲ್ಲದೇ, ಈ ಮಾತುಕತೆ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳು ಎದುರಾಗಿತ್ತು. ಆದರೆ, ಈಗ ಗೊಂದಲಕ್ಕೆ ತೆರೆ ಬಿದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್