ಪಾಕ್ನಿಂದ 45 ಭಾರತೀಯ ಮೀನುಗಾರರ ಬಂಧನ
ಪಾಕಿಸ್ತಾನದ ಭದ್ರತಾ ಪಡೆ 45 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಐದು ಬೋಟುಗಳನ್ನು ವಶಪಡಿಸಿಕೊಂಡಿದೆ ಎಂದು...
ಕರಾಚಿ: ಪಾಕಿಸ್ತಾನದ ಭದ್ರತಾ ಪಡೆ 45 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಐದು ಬೋಟುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಪೊಲೀಸರ ವಶಕ್ಕೆ ನೀಡಲಾಗಿದೆ. ಅರಬೀ ಸಮುದ್ರದ ಗಡಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ ಸಂಬಂಧಿ ಗಡಿ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕರಾಚಿಯಲ್ಲಿರುವ ಡಾಕ್ಸ್ ಪೊಲೀಸ್ ಠಾಣಾ ಸಿಬ್ಬಂದಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಭಾರತ ನಡುವಿನ ಸಮುದ್ರ ಗಡಿ ಭಾಗದಲ್ಲಿ ಗಡಿ ಉಲ್ಲಂಘನೆ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಪಾಕಿಸ್ತಾನವು ನಿಯಮಿತವಾಗಿ ಬಂಧಿಸುತ್ತಿರುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.