ಮೆಲ್ಬೋರ್ನ್: ಉಗ್ರರು ಬಾಂಬ್ ಬೆದರಿಕೆ ಹಾಕಿದ್ದ ಹಿನ್ನಲೆಯಲ್ಲಿ ಆಸ್ಟ್ರೇಲಿಯಾದ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನ್ಯೂನೌತ್ ವೇಲ್ಸ್ ನ 7 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿರುವ ಉಗ್ರರು ಮಕ್ಕಳ ಹತ್ಯೆ ನಡೆಸುವುದಾಗಿ ಹೇಳಿದ್ದಾರೆ. ರಿಚ್ ಮಂಡ್, ಮೇನಾವೇಲ್, ಅಂಬರ್ ವೇಲ್, ಪೆನರಿಪ್, ಊಲೂವೇರ್, ಉಲ್ಲಾದುಲ್ಲಾ ಮತ್ತು ಲೇಕ್ ಇಲ್ಲವರ್ರ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.
ದೂರಾವಣಿ ಮೂಲಕ ಉಗ್ರರು ಬೆದರಿಕೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆದರಿಕೆ ಕರೆ ಬಂದಿರುವುದು ಪೊಲೀಸರು ಖಚಿತ ಪಡಿಸಿದ್ದಾರೆ. ಅಲ್ಲದೇ, ಯಾವುದೇ ಸ್ಫೋಟವಾಗದಂತೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಸ್ ಮಸ್ ರಜೆ ನಂತರ ನಿನ್ನೆಯಷ್ಟೆ ಶಾಲೆಗಳು ಪುನರಾರಂಭಗೊಂಡಿದ್ದವು. ಉಗ್ರರ ಬೆದರಿಕೆ ಹಿನ್ನಲೆಯಲ್ಲಿ ಮತ್ತೆ ಶಾಲೆಗಳಿಗೆ ರಜೆ ನೀಡಲಾಗಿದೆ.