ಇಸ್ಲಾಮಾಬಾದ್: ಶಾಂತಿಯುತ ಪಾಕಿಸ್ತಾನಕ್ಕೆ ಮೊದಲ ಆದ್ಯತೆ ನೀಡುವುದಾಗಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
"ದೇಶದಲ್ಲಿರುವ ಉಗ್ರರನ್ನು ನಿರ್ನಾಮ ಮಾಡಿ ಶಾಂತಿ ನೆಲೆಸುವಂತೆ ಮಾಡುವುದು ಪಾಕಿಸ್ತಾನ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಭಯೋತ್ಪಾದನೆ ನಿಲ್ಲುವವರೆಗೂ ಉಗ್ರರ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಷರೀಫ್ ತಿಳಿಸಿದ್ದಾರೆ.
ಪಾಕಿಸ್ತಾನದ ಆರ್ಥಿಕ, ಭದ್ರತೆ ವ್ಯಸ್ಥೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಪಾಕ್ ಪ್ರಧಾನಿ ಷರೀಫ್, ಪಾಕಿಸ್ತಾನದ ಆರ್ಥಿಕ ಬೆಳವಣಿಗೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ. ಬಚಾ ಖಾನ್ ವಿವಿಯ ಮೇಲೆ ದಾಳಿ ನಡೆಸಿವದರ ವಿರುದ್ಧ ನಡೆಯುತ್ತಿರುವ ತನಿಖೆ ಪ್ರಗತಿಯ ಬಗ್ಗೆ ಮಾಹಿತಿ ಪಡೆದಿರುವ ಷರೀಫ್, ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.