ಸರ್ತಾಜ್ ಅಜೀಜ್ 
ವಿದೇಶ

ದ್ವಿಪಕ್ಷೀಯ ಮಾತುಕತೆ ಸ್ಥಗಿತಕ್ಕೆ ಭಯೋತ್ಪಾದನೆ ಕಾರಣ ಸರಿಯಲ್ಲ: ಸರ್ತಾಜ್ ಅಜೀಜ್

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಭಾರತ ನೀಡುತ್ತಿರುವ ಭಯೋತ್ಪಾದನೆ ಕಾರಣ ಸರಿಯಲ್ಲ ಎಂದು ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಭಾರತ ನೀಡುತ್ತಿರುವ ಭಯೋತ್ಪಾದನೆ ಕಾರಣ ಸರಿಯಲ್ಲ ಎಂದು ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ.

ಜ.2 ರಂದು ನಡೆದ ಪಠಾಣ್ ಕೋಟ್ ಉಗ್ರ ದಾಳಿ ನಡೆದಿದ್ದು, ಅಂದಿನಿಂದ ಭಾರತ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಳಿಸಿದೆ. ಆದರೆ ಇಂತಹ ಘಟನೆಗಳಿಂದ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಳ್ಳಬೇಕು ಎಂಬುದು ಸರಿಯಲ್ಲ, ಭಾರತವೂ ಸೇರಿದಂತೆ ನೆರೆ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಉತ್ತಮಗೊಳಿಸಿಕೊಳ್ಳಬೇಕೆಂಬುದು ಪಾಕಿಸ್ತಾನದ ಆದ್ಯತೆಯಾಗಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗದೆ ಇರುವುದು ಸಮಸ್ಯೆಯೇ ಆಗಿದರೂ, ಉಭಯ ದೇಶಗಳ ನಡುವಿನ ಸಂಬಂಧ ಸೌಹಾರ್ದಯುತವಾಗಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದು ವೇಳೆ ಎರಡು ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸಲು ಸಾಧ್ಯವಾಗದಿದ್ದಲ್ಲಿ, ಹಾಳಾಗಬಾರದಂತೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ ಸರ್ತಾಜ್ ಅಜೀಜ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!