ನರೇಂದ್ರ ಮೋದಿ - ಜೇಕಬ್‌ ಝುಮಾ 
ವಿದೇಶ

ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಸಹಕಾರ ಅಗತ್ಯ: ಆಫ್ರಿಕಾದಲ್ಲಿ ಪ್ರಧಾನಿ ಮೋದಿ

ಭಯೋತ್ಪಾದನೆ ಬಗ್ಗೆ ಎಲ್ಲರಿಗೂ ಆತಂಕವಿದ್ದು, ಅದರ ವಿರುದ್ಧದ ಹೋರಾಟಕ್ಕೆ ಸಹಕಾರ ಅಗತ್ಯ ಎಂದು ಪ್ರಧಾನಿ ನರೇಂದ್ರ...

ಪ್ರಿಟೋರಿಯ: ಭಯೋತ್ಪಾದನೆ ಬಗ್ಗೆ ಎಲ್ಲರಿಗೂ ಆತಂಕವಿದ್ದು, ಅದರ ವಿರುದ್ಧದ ಹೋರಾಟಕ್ಕೆ ಸಹಕಾರ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
ಆಫ್ರಿಕಾದ ನಾಲ್ಕು ದೇಶಗಳ ಪ್ರವಾಸದಲ್ಲಿರುವ ಮೋದಿ ಅವರು ಮೊಜಾಂಬಿಕ್ ದೇಶದ ಪ್ರವಾಸವನ್ನು ಯಶಸ್ವಿಗೊಳಿಸಿ ಇಂದು ದಕ್ಷಿಣ ಆಫ್ರಿಕ ತಲುಪಿದ್ದಾರೆ. ದಕ್ಷಿಣ ಆಫ್ರಿಕ ಅಧ್ಯಕ್ಷ ಜೇಕಬ್‌ ಝುಮಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಯೋತ್ಪಾದನೆ ವಿರುದ್ಧ ಸಕ್ರಿಯವಾಗಿ ಹೋರಾಡಲು, ಸಹಕರಿಸಲು ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಮಸ್ಯೆಗಳನ್ನು ನಿಭಾಯಿಸಲು ಉಭಯ ದೇಶಗಳು ನಿರ್ಧರಿಸಿವೆ ಎಂದರು.
ಭಾರತ ಮತ್ತು ದಕ್ಷಿಣ ಆಫ್ರಿಕ ರಕ್ಷಣಾ ಉತ್ಪಾದನೆ, ಗಣಿ ಮತ್ತು ಖನಿಜ ಕ್ಷೇತ್ರಗಳಲ್ಲಿ ಪರಸ್ಪರರಿಗೆ ಲಾಭದಾಯಕವಾಗುವಂತೆ ದ್ವಿಪಕ್ಷೀಯ ಬಾಂಧವ್ಯಗಳನ್ನು ಬಲಪಡಿಸಲು ನಿರ್ಧರಿಸಿವೆ ಎಂದರು. ಅಲ್ಲದೆ ಭಾರತವು ಅತ್ಯಾಕರ್ಷಕ ಹೂಡಿಕೆ ತಾಣವಾಗಿದ್ದು, ರಕ್ಷಣಾ ಉತ್ಪಾದನೆ ಕ್ಷೇತ್ರದಲ್ಲಿ ದಕ್ಷಿಣ ಆಫ್ರಿಕವು ಪ್ರಮುಖ ದೇಶವಾಗಿದೆ ಎಂದು ಹೇಳಿದರು.
ಪರಮಾಣು ಪೂರೈಕೆದಾರರ ಸಮೂಹವನ್ನು ಸೇರುವ ಭಾರತದ ಪ್ರಯತ್ನಗಳಿಗೆ ದಕ್ಷಿಣ ಆಫ್ರಿಕ ನೀಡಿರುವ ಬೆಂಬಲವನ್ನು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪ್ರಶಂಸಿಸಿ ಕೃತಜ್ಞತೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!