ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಢಾಕಾ ದಾಳಿಯಲ್ಲಿ 9 ಶಂಕಿತ ಉಗ್ರರ ಹತ್ಯೆ

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮಂಗಳವಾರ ಪೊಲೀಸರು ನಡೆಸಿದ ದಾಳಿಯಲ್ಲಿ 9 ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Guruprasad Narayana
Updated On : 26 Jul 2016, 11:42 am
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮಂಗಳವಾರ ಪೊಲೀಸರು ನಡೆಸಿದ ದಾಳಿಯಲ್ಲಿ 9 ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಈ ದಾಳಿಯಲ್ಲಿ ಕೆಲವು ಉಗ್ರರನ್ನು ಬಂಧಿಸಲಾಗಿದ್ದು, ಸ್ಫೋಟಕಗಳು, ಗ್ರೆನೇಡ್ ಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. 
ನಗರದ ಕಲ್ಯಾಣಪುರ ಪ್ರದೇಶದ ಅಡಗುತಾಣವೊಂದರ ಮೇಲೆ ಬೆಳಗ್ಗೆ ಸುಮಾರು 5:30 ಕ್ಕೆ ದಾಳಿ ಮಾಡಿದ ಪೊಲೀಸರು ಮತ್ತು ರ್ಯಾಪಿಡ್ ಆಕ್ಷನ್ ಬೆಟಾಲಿಯನ್ ಪಡೆಯ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Advertisement

Advertisement

ಈ ದಾಳಿಯಲ್ಲಿ ಸಂಪರ್ಕ ಸಾಧನಗಳು ಮತ್ತು ಜಿಹಾದಿ ಪುಸ್ತಕಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments