ಸಾಂದರ್ಭಿಕ ಚಿತ್ರ 
ವಿದೇಶ

ಸಿರಿಯಾದಲ್ಲಿ ರಷ್ಯಾದ ಮಿಲಿಟರಿ ಹೆಲಿಕಾಪ್ಟರ್ ಪತನ; ಐವರು ಸಾವು

ರಷ್ಯಾದ ಮಿ-8 ಮಿಲಿಟರಿ ಹೆಲಿಕಾಪ್ಟರ್ ಸಿರಿಯಾ ಬಳಿ ಇದ್ಲಿಬ್ ಪ್ರಾಂತ್ಯದಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ...

ರಷ್ಯಾ: ರಷ್ಯಾದ ಮಿ-8 ಮಿಲಿಟರಿ ಹೆಲಿಕಾಪ್ಟರ್ ಸಿರಿಯಾ ಬಳಿ ಇದ್ಲಿಬ್ ಪ್ರಾಂತ್ಯದಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಎಲ್ಲಾ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಹೆಲಿಕಾಪ್ಟರ್ ನಲ್ಲಿದ್ದವರ ಗುರುತು ಪತ್ತೆಯಾಗಿಲ್ಲ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ರಕ್ಷಣಾ ಸಚಿವಾಲಯದಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಹೆಲಿಕಾಪ್ಟರ್ ನಲ್ಲಿದ್ದವರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ನ್ನು ಸಮಯಕ್ಕೆ ಸರಿಯಾಗಿ ಪಕ್ಕಕ್ಕೆ ಚಲಿಸಿ ಹೆಚ್ಚು ಜನರ ಸಾವನ್ನು ತಪ್ಪಿಸಿ ವಿರೋಚಿತ ಮೆರೆದಿದ್ದಾರೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೊವ್ ಪತ್ರಕರ್ತರಿಗೆ ತಿಳಿಸಿದ್ದಾರೆ.
ಸಿಂಗಾಪೂರ ಮೂಲದ ಸ್ಟ್ರೈಟ್ಸ್ ಟೈಮ್ಸ್ ವರದಿ ಪ್ರಕಾರ, ಮಿ-8 ಸಾಗಾಟ ಹೆಲಿಕಾಪ್ಟರ್ ಆಗಿದ್ದು, ಅಲೆಪ್ಪೊ ಸಿಟಿಗೆ ಮಾನವೀಯ ನೆರವು ನೀಡಿದ ನಂತರ ರಷ್ಯಾದ ಮುಖ್ಯ ವಾಯುನೆಲೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ.
ಹೆಲಿಕಾಪ್ಟರ್ ನಲ್ಲಿ ಐವರಿದ್ದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.ಈ ವರ್ಷ ಸಿರಿಯಾದಲ್ಲಿ ಕಾರ್ಯಚರಣೆ ವೇಳೆ ಅಪಘಾತಕ್ಕೀಡಾಗುತ್ತಿರುವ ರಷ್ಯಾದ ಮೂರನೇ ಹೆಲಿಕಾಪ್ಟರ್ ಇದು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!