ಪಾಕ್ ನಿಂದ 18 ಭಾರತೀಯ ಮೀನುಗಾರರ ಬಿಡುಗಡೆ
ಜಲ ಗಡಿ ಉಲ್ಲಂಘನೆ ಹಿನ್ನಲೆಯಲ್ಲಿ ಬಂಧಿತರಾಗಿದ್ದ ಭಾರತೀಯ ಮೂಲದ 18 ಮೀನುಗಾರರನ್ನು...
ಇಸ್ಲಾಮಾಬಾದ್: ಜಲ ಗಡಿ ಉಲ್ಲಂಘನೆ ಹಿನ್ನಲೆಯಲ್ಲಿ ಬಂಧಿತರಾಗಿದ್ದ ಭಾರತೀಯ ಮೂಲದ 18 ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ.
ಉತ್ತಮ ನಡವಳಿಕೆ ಹಿನ್ನಲೆಯಲ್ಲಿ 18 ಮೀನುಗಾರರನ್ನು ಪಾಕಿಸ್ತಾನ ಬಿಡುಗಡೆಗೊಳಿಸಿದೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ.
ಕರಾಚಿಯ ಲಂದಿ ಜೈಲಿನಲ್ಲಿದ್ದ 18 ಖೈದಿಗಳು ಸೋಮವಾರ ಲಾಹೋರ್ ಗೆ ಬಂದು ತಲುಪಲಿದ್ದಾರೆ. ಪಾಕಿಸ್ತಾನ ಅಧಿಕಾರಿಗಳು ಪಂಜಾಬ್ ನ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಒಪ್ಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವರ್ಷ ಪಾಕಿಸ್ತಾನ 199 ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದೆ ಎಂದು ವರದಿ ಹೇಳಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.