ನವದೆಹಲಿ: ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕಾಗೆ ಭೇಟಿ ನೀಡಿದ್ದಾರೆ.
ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಹ್ವಾನದ ಮೇರೆಗೆ ಇಂದು ವಾಷಿಂಗ್ಟನ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಎರಡು ದಿನಗಳ ಭೇಟಿಯಲ್ಲಿ ಅಮೆರಿಕಾದ ಜಂಟಿ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಲಿದ್ದು, ಇದೇ ಸಂದರ್ಭದಲ್ಲಿ ಭಾರತ ಹಾಗೂ ಅಮೆರಿಕಾ ನಡುವೆ ಆರ್ಥಿಕ ವ್ಯವಸ್ಥೆ, ಇಂಧನ, ಪರಿಸರ, ರಕ್ಷಣೆ ಹಾಗೂ ಮುಂತಾದ ವಿಷಯಗಳ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಅಮೆರಿಕಾದ ಥಿಂಕ್ ಟ್ಯಾಂಕ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಲಾಗಿದ್ದು, ಒಬಾಮಾ, ಮೋದಿ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ತದ ನಂತರ ಅಮೆರಿಕಾ-ಭಾರತ ಉದ್ಯಮದ ಕುರಿತು ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.