ಮೆಕ್ಸಿಕೋ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿ 
ವಿದೇಶ

ಈಗ ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಮೆಕ್ಸಿಕೋದಿಂದಲೂ ಬೆಂಬಲ

ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ)ಕ್ಕೆ ಸೇರ್ಪಡೆಯಾಗುವುದಕ್ಕೆ ಭಾರತದ ರಾಜತಾಂತ್ರಿಕ ಶ್ರಮ ಫಲಪ್ರದವಾಗಿದೆ.

ಮೆಕ್ಸಿಕೋ: ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ)ಕ್ಕೆ ಸೇರ್ಪಡೆಯಾಗುವುದಕ್ಕೆ ಭಾರತದ ರಾಜತಾಂತ್ರಿಕ ಶ್ರಮ ಫಲ ನೀಡಿದ್ದು, ಸ್ವಿಟ್ಜರ್ಲ್ಯಾಂಡ್ ನಂತರ ಮೆಕ್ಸಿಕೋ ಸಹ ಎನ್ಎಸ್ ಜಿ ಗೆ ಭಾರತದ ಸೇರ್ಪಡೆಗೆ ಬೆಂಬಲ ಘೋಷಿಸಿದೆ.

ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೆಕ್ಸಿಕೋಗೆ ಭೇಟಿ ನೀಡಿದ್ದು ದ್ವಿಪಕ್ಷೀಯ ಮಾತುಕತೆ ನಂತರ ಮೆಕ್ಸಿಕೋ ಅಧ್ಯಕ್ಷ ಎನ್ರಿಕೆ ಪೇನ ನಿಯೆಟೊ ವಿಶ್ವ ಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹಕ್ಕೆ ಭಾರತ ಸೇರ್ಪಡೆಯಾಗುವುದಕ್ಕೆ ಮೆಕ್ಸಿಕೋ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. ಮೆಕ್ಸಿಕೋ ಅಧ್ಯಕ್ಷರ ಬೆಂಬಲಕ್ಕೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದು, ಈ ಬೆಳವಣಿಗೆಯನ್ನು ಭಾರತದ ರಾಜತಾಂತ್ರಿಕ ಶ್ರಮಕ್ಕೆ ಫಲಪ್ರದವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಬೇಕಿದ್ದ ರಾಷ್ಟ್ರಗಳ ಪಟ್ಟಿಯಲ್ಲಿ ಮೊದಲು ಅಫ್ಘಾನಿಸ್ತಾನ, ಕತಾರ್, ಅಮೆರಿಕ ದೇಶಗಳು ಮಾತ್ರವೇ ಇತ್ತು. ಆದರೆ ಪರಮಾಣು ಪೂರೈಕೆದಾರ ಸಮೂಹಕ್ಕೆ ಹೊಸ ಸದಸ್ಯರನ್ನು ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೂ.9 ರಂದು 48 ಸದಸ್ಯ ರಾಷ್ಟ್ರಗಳು ಸಭೆ ಕರೆದಿದ್ದ ಹಿನ್ನೆಲೆಯಲ್ಲಿ ಭಾರತದ ಸದಸ್ಯತ್ವಕ್ಕೆ ಇತರ ರಾಷ್ಟ್ರಗಳಿಂದ ಬೆಂಬಲ ಗಳಿಸುವ ಉದ್ದೇಶದಿಂದ ಕೊನೆಯ ಕ್ಷಣದಲ್ಲಿ ಸ್ವಿಟ್ಜರ್ಲ್ಯಾಂಡ್ ಹಾಗೂ ಮೆಕ್ಸಿಕೋ ಭೇಟಿ ನಿಗದಿಪಡಿಸಲಾಯಿತು ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಜೂ.6 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಿಟ್ಜರ್ಲ್ಯಾಂಡ್ ಪ್ರವಾಸದ ವೇಳೆ ಸ್ವಿಸ್ ಅಧ್ಯಕ್ಷರು ಭಾರತದ ಸದಸ್ಯತ್ವಕ್ಕೆ ಬೆಂಬಲ ಘೋಷಿಸಿದ್ದರು. ಸ್ವಿಟ್ಜರ್ಲ್ಯಾಂಡ್, ಮೆಕ್ಸಿಕೋ ದೇಶಗಳ ಜೊತೆಗೆ ಅಮೆರಿಕ, ಫ್ರಾನ್ಸ್, ಬ್ರಿಟನ್, ರಷ್ಯಾ ಸೇರಿದಂತೆ ಬಹುತೇಕ ರಾಷ್ಟ್ರಗಳು ಭಾರತದ ಸದಸ್ಯತ್ವಕ್ಕೆ ಬೆಂಬಲ ನೀಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!