ಹಿಲರಿ ಕ್ಲಿಂಟನ್-ಬರಾಕ್ ಒಬಾಮ 
ವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಹಿಲರಿ ಕ್ಲಿಂಟನ್ ಗೆ ಬರಾಕ್ ಒಬಾಮ ಬೆಂಬಲ

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡ ಹಿಲರಿ ಕ್ಲಿಂಟನ್ ಗೆ ಹಾಲಿ ಅಧ್ಯಕ್ಷ ಬರಾಕ್ ಒಬಾಮ ಬೆಂಬಲ ಸೂಚಿಸಿದ್ದಾರೆ.

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡ ಹಿಲರಿ ಕ್ಲಿಂಟನ್ ಗೆ ಹಾಲಿ ಅಧ್ಯಕ್ಷ ಬರಾಕ್ ಒಬಾಮ ಬೆಂಬಲ ಸೂಚಿಸಿದ್ದಾರೆ.

ನ್ಯೂಜೆರ್ಸಿ, ನ್ಯೂ ಮೆಕ್ಸಿಕೊ ಮತ್ತು ಸೌತ್‌ ಡಕೋಟಾ ರಾಜ್ಯಗಳಲ್ಲಿ ನಡೆದ ಪ್ರಾಥಮಿಕ ಚುನಾವಣೆಗಳಲ್ಲಿ ಬಹುಮತ ಪಡೆಯುವ ಮೂಲಕ ಡೆಮಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಹಿಲರಿ ಕ್ಲಿಂಟನ್ ಸ್ಪರ್ಧಿಸುವುದು ಸ್ಪಷ್ಟವಾದ ಬೆನ್ನಲ್ಲೇ ಬರಾಕ್ ಒಬಾಮ ಹಿಲರಿ ಕ್ಲಿಂಟನ್ ಗೆ ಬೆಂಬಲ ನೀಡಿದ್ದು ಗೆಲುವಿಗೆ ಪಕ್ಷದ ಎಲ್ಲರೂ ಒಟ್ಟಾಗುವಂತೆ ಸೂಚಿಸಿದ್ದಾರೆ.

ಅಮೆರಿಕದ ಜನತೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇಂದು ನನ್ನ ಧ್ವನಿಯನ್ನು ಅಮೆರಿಕ ಜನತೆಯೊಂದಿಗೆ ಸೇರಿಸಲು ಬಯಸುತ್ತೇನೆ, ಹಿಲರಿ ಕ್ಲಿಂಟನ್ ಅವರನ್ನು ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಅನುಮೋದಿಸುತ್ತಿದ್ದೇನೆ ಎಂದು ಬರಾಕ್ ಒಬಾಮ ವಿಡಿಯೋ ಮೂಲಕ ಹೇಳಿದ್ದಾರೆ.  ಬರಾಕ್ ಒಬಾಮ ಹಾಗೂ ಹಿಲರಿ ಕ್ಲಿಂಟನ್ ಅವರ ಜಂಟಿ ಚುನಾವಣಾ ಪ್ರಚಾರ ಮುಂದಿನ ಬುಧವಾರದಿಂದ ಪ್ರಾರಂಭವಾಗಲಿದೆ. 2008 ರಲ್ಲಿ ಹಾಗೂ 2012 ರಲ್ಲಿ ಸತತ ಎರಡು ಅವಧಿಗೆ ಬರಾಕ್ ಒಬಾಮ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ಹಿಲರಿ ಕ್ಲಿಂಟನ್ ಅವರಿಗೆ ಬರಾಕ್ ಒಬಾಮ ಬೆಂಬಲ ನೀಡುವುದು ನಿರೀಕ್ಷಿತವೇ ಆಗಿತ್ತು. ಹಿಲರಿ ಕ್ಲಿಂಟನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯ ಸ್ಥಾನಕ್ಕೆ ನಾಮನಿರ್ದೇಶನಗೊಳ್ಳಲು ಅಗತ್ಯವಾಗಿದ್ದ 2,383 ಪ್ರತಿನಿಧಿಗಳ ಬೆಂಬಲವನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್