ಸಂಗ್ರಹ ಚಿತ್ರ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ 
ವಿದೇಶ

ಭಾರತದ ಎನ್ ಎಸ್ ಜಿ ಸದಸ್ಯತ್ವ ಪಾಕಿಸ್ತಾನವನ್ನು ಪ್ರಚೋದಿಸುತ್ತದೆ: ಚೀನಾದ ಎಚ್ಚರಿಕೆ

ಚೀನಾ ಈಗ ತನ್ನ ವಿರೋಧಕ್ಕೆ ಹೊಸ ಕಾರಣವನ್ನು ನೀಡಿದ್ದು ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ನೀಡಿದರೆ ಪಾಕಿಸ್ತಾನವನ್ನು ಪ್ರಚೋದಿಸಿದಂತಾಗುತ್ತದೆ

ಬೀಜಿಂಗ್: ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ(ಎನ್ಎಸ್ ಜಿ) ಸಮೂಹಕ್ಕೆ ಭಾರತದ ಸದಸ್ಯತ್ವವನ್ನು ವಿರೋಧಿಸುತ್ತಿರುವ ಚೀನಾ ಈಗ ತನ್ನ ವಿರೋಧಕ್ಕೆ ಹೊಸ ಕಾರಣವನ್ನು ನೀಡಿದ್ದು ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ನೀಡಿದರೆ ಪಾಕಿಸ್ತಾನವನ್ನು ಪ್ರಚೋದಿಸಿದಂತಾಗುತ್ತದೆ ಎಂದು ಎಚ್ಚರಿಸಿದೆ.

ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ನೀಡಿದರೆ ಅದು ಭಾರತ-ಚೀನಾ- ಪಾಕಿಸ್ತಾನದ ಪ್ರದೇಶದಲ್ಲಿ ಪೈಪೋಟಿಕೆ ಕಾರಣವಾಗಿ ಅಣು ಘರ್ಷಣೆಗೆ ತಿರುಗಲಿದೆ ಎಂದು ವಿಶ್ಲೇಷಿಸಿದೆ.

ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ಅಣ್ವಸ್ತ್ರ ರಾಷ್ಟ್ರಗಳಾಗಿದ್ದು, ಪರಸ್ಪರ ನಿಗಾವಹಿಸಿವೆ. ಈ ಹಂತದಲ್ಲಿ ಭಾರತಕ್ಕೆ ಎನ್ಎಸ್ ಜಿ ಸದಸ್ಯತ್ವ ನೀಡಿದರೆ ಪಾಕಿಸ್ತಾನ ಪ್ರಚೋದನೆಗೊಳಗಾಗಲಿದ್ದು ಇದರಿಂದ ಪ್ರಾದೇಶಿಕ ಭದ್ರತೆಗೆ ಅಪಾಯ ಎದುರಾಗಲಿದೆ ಎಂದು ಚೀನಾ ಅಭಿಪ್ರಾಯಪಟ್ಟಿದೆ. ಎನ್ಎಸ್ ಜಿ ಸದಸ್ಯತ್ವ ಪಡೆಯಲು ಯತ್ನಿಸುತ್ತಿರುವ ಭಾರತಕ್ಕೆ ತನ್ನದೇ ಆದ ಲೆಕ್ಕಾಚಾರಗಳಿದ್ದು, ಪ್ರಾದೇಶಿಕ ಪರಮಾಣು ಯೋಜನೆಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಲಗ್ಗೆ ಇಡುವ ಉದ್ದೇಶ ಹೊಂದಿದೆ ಎಂದು ಚೀನಾ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಸಿದ್ದು ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂಪಾರ್ಕ್‌ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ!

ಬಿಹಾರಕ್ಕೆ ಮೋದಿ ಬಂಪರ್ ಗಿಫ್ಟ್: 7,616 ಕೋಟಿ ರೂ. ರೈಲು, ರಸ್ತೆ ಯೋಜನೆಗಳಿಗೆ ಕೇಂದ್ರ ಅನುಮೋದನೆ

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ಅಕ್ರಮ ಗಣಿಗಾರಿಕೆ ತಡೆ, ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ರಾಜ್ಯ ಗೆಜೆಟ್‌ನಲ್ಲಿ ಪ್ರಕಟ

SCROLL FOR NEXT