ಸಾಂದರ್ಭಿಕ ಚಿತ್ರ 
ವಿದೇಶ

ಅಫ್ಘಾನಿಸ್ಥಾನದಲ್ಲಿ ೪೯ ಸುಸಜ್ಜಿತ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದ ಸೇನೆ

ಅಪ್ಘಾನಿಸ್ಥಾನದ ದಕ್ಷಿಣ ಪ್ರಾಂತ್ಯದಲ್ಲಿ ಅಪ್ಘಾನಿಸ್ಥಾನದ ಸೇನೆ ಕನಿಷ್ಠ ೪೯ ಸುಸಜ್ಜಿತ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಕಾಬುಲ್: ಅಪ್ಘಾನಿಸ್ಥಾನದ ದಕ್ಷಿಣ ಪ್ರಾಂತ್ಯದಲ್ಲಿ ಅಪ್ಘಾನಿಸ್ಥಾನದ ಸೇನೆ ಕನಿಷ್ಠ ೪೯ ಸುಸಜ್ಜಿತ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

"ಕಳೆದ ೨೪ ಘಂಟೆಗಳಲ್ಲಿ ಜಾಬುಲ್ ಮತ್ತು ಉರುಜ್ಬನ್ ಪ್ರಾಂತ್ಯಗಳಲ್ಲಿ ಸೇನೆ ೪೯ ಸುಸಜ್ಜಿನ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದೆ" ಎಂದು ಸೇನೆ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

"ಈ ದಾಳಿಯ ವೇಳೆಯಲ್ಲಿ ಮೀರ್ ಕಲಾಮ್ ಎಂಬ ಭಯೋತ್ಪಾದಕನನ್ನು ಬಂಧಿಸಲಾಗಿದೆ" ಎಂದು ಕೂಡ ಹೇಳಿಕೆ ತಿಳಿಸಿದೆ.

ಶಾಂತಿಯ ಶತ್ರುಗಳು ಮಾಡಿರುವ ಕೆಲಸ ಎಂದು ಹೇಳಿರುವ ಹೇಳಿಕೆಯಲ್ಲಿ, ತಾಲಿಬಾನ್ ಉಗ್ರರು ಹೆದ್ದಾರಿಗಳಲ್ಲಿ ಐ ಇ ಡಿ ಬಾಂಬ ಗಳನ್ನು ಸ್ಫೋಟಿಸಲು ಸಂಚು ಹಾಕಿದ್ದರು ಎಂದು ಸೇನೆ ತಿಳಿಸಿದೆ.

ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಳ್ಳಲು ತಾಲಿಬಾನ್ ಉಗ್ರಗಾಮಿ ಸಂಘಟನೆ ಐ ಇ ಡಿ ಗಳನ್ನು ಬಳಸಿಕೊಳ್ಳುತ್ತಿದೆ.

ದೇಶದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ೨೦೧೫ ರಲ್ಲೇ ೩೪೫೦ ನಾಗರಿಕರು ಮೃತಪಟ್ಟಿದ್ದು, ೭೪೫೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!