ದಲೈ ಲಾಮ- ಬರಾಕ್ ಒಬಾಮ 
ವಿದೇಶ

ಶ್ವೇತ ಭವನದಲ್ಲಿ ಬರಾಕ್ ಒಬಾಮ- ದಲೈ ಲಾಮ ಭೇಟಿ

ಅಮೆರಿಕ ಅಧ್ಯಕ್ಷರನ್ನು ಟಿಬೆಟ್, ಬೌದ್ಧ ಧರ್ಮ ಗುರು ದಲೈ ಲಾಮ ಶ್ವೇತ ಭವನದಲ್ಲಿ ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿರುವುದು ಚೀನಾದ ಅಧಿಕಾರಿ ವರ್ಗದ ಕೆಂಗಣ್ಣಿಗೆ ಗುರಿಯಾಗಿದೆ.

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷರನ್ನು ಟಿಬೆಟ್, ಬೌದ್ಧ ಧರ್ಮ ಗುರು ದಲೈ ಲಾಮ ಶ್ವೇತ ಭವನದಲ್ಲಿ ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿರುವುದು ಚೀನಾದ ಅಧಿಕಾರಿ ವರ್ಗದ ಕೆಂಗಣ್ಣಿಗೆ ಗುರಿಯಾಗಿದೆ.

ದಲೈ ಲಾಮ ಅವರನ್ನು ಚೀನಾ ಟಿಬೆಟ್ ನ ಪ್ರತ್ಯೇಕತಾವಾದದ ಚಳುವಳಿಯ ನಾಯಕ ಎಂದೇ ಗುರುತಿಸಿದ್ದು, ದಲೈ ಲಾಮ ಅಮೆರಿಕ ಅಧ್ಯಕ್ಷರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ. ದಲೈ ಲಾಮ ಹಾಗೂ ಅಮೆರಿಕ ಅಧ್ಯಕ್ಷರ ನಡುವಿನ ಮಾತುಕತೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೋಶ ಎರ್ನೆಸ್ಟ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ದ್ವಿಪಕ್ಷೀಯ ಮಾತುಕತೆಗಿಂತ ಹೆಚ್ಚು ವೈಯಕ್ತಿಕ ಕುಅಶಲೋಪರಿ ಬಗ್ಗೆ ಕೆಂದ್ರೀಕೃತವಾಗಿತ್ತು ಎಂದಿದ್ದು ಹೆಚ್ಚಿನ ಮಾಹಿತಿ ನೀಡುವುದಕ್ಕೆ ನಿರಾಕರಿಸಿದ್ದಾರೆ.  ಒಬಾಮ- ದಲೈ ಲಾಮ ಅವರ ಮಾತುಕತೆ ವೇಳೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ್ದ ಕಾರಣ ಹೆಚ್ಚಿನ ಮಾತುಕತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಉಭಯ ನಾಯಕರೂ ಮಾನವ ಹಕ್ಕುಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ  ಚರ್ಚೆ ನಡೆಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ. ದಲೈಲಾಮ ಭೇಟಿಯಿಂದಾಗಿ ಅಮೆರಿಕ ಬೆಂಬಲಿಸುತ್ತಿರುವ ಒಂದೇ ಚೀನಾ ನೀತಿಗೆ ಈ ಭೇಟಿಯಿಂದ ಧಕ್ಕೆ ಉಂಟಾಗಬಾರದು ಎಂದು ಎಚ್ಚರಿಕೆ ನೀಡಿದ್ದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!