ಪ್ರಧಾನಿ ಮೋದಿ - ಡೇವಿಡ್ ಕ್ಯಾಮರೂನ್
ಲಂಡನ್: ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬ್ರಿಟನ್ ಖಂಡಿತ ಬೆಂಬಲ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಭರವಸೆ ನೀಡಿದ್ದಾರೆ.
ಮುಂದಿನ ವಾರ ನಡೆಯಲಿರುವ 48 ಪರಮಾಣು ಪೂರೈಕೆದಾರರ ಸಮೂಹ(ಎನ್ಎಸ್ ಜಿ)ದ ಸರ್ವಸದಸ್ಯರ ಸಭೆಯಲ್ಲಿ ಭಾರತದ ಸದಸ್ಯತ್ವಕ್ಕೆ ಬೆಂಬಲ ನೀಡುವುದಾಗಿ ಕ್ಯಾಮರೂನ್ ಅವರು ದೂರವಾಣಿ ಮೂಲಕ ಪ್ರಧಾನಿ ಮೋದಿ ಅವರಿಗೆ ಗುರುವಾರ ಖಚಿತಪಡಿಸಿದ್ದಾರೆ.
ಎನ್ಎಸ್ ಜಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರು ಭಾರತದ ಪ್ರಧಾನಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಬೆಂಬಲ ನೀಡುವುದಾಗಿ ಖಚಿತಪಡಿಸಿದ್ದಾರೆ ಎಂದು ಡೌನಿಂಗ್ ಸ್ಟ್ರೀಟ್ ವಕ್ತಾರರೊಬ್ಬರು ತಿಳಿಸಿದ್ದಾರೆ.
ಇನ್ನು ಅಮೆರಿಕ ಸಹ ಭಾರತದ ಅರ್ಜಿಗೆ ಬೆಂಬಲ ನೀಡಬೇಕೆಂದು ಎಲ್ಲಾ 48 ಸದಸ್ಯ ರಾಷ್ಟ್ರಗಳಿಗೂ ಒತ್ತಾಯಿಸಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಿದ್ದಾಗಲೂ ಅಮೆರಿಕ ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸ್ಪಷ್ಟಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics