ವಿದೇಶ

ಅಮೆರಿಕ ನಡೆಸಿದ ಡ್ರೋನ್ ದಾಳಿಗೆ ಅಫ್ಘಾನಿಸ್ತಾನದ 16 ಉಗ್ರರು ಬಲಿ!

Srinivas Rao BV

ಕಾಬುಲ್: ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಗೆ 16 ಉಗ್ರರು ಬಲಿಯಾಗಿದ್ದಾರೆ ಎಂದು ಅಫ್ಘಾನಿಸ್ತಾನ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.

ತಾಲಿಬಾನ್ ಉಗ್ರ ಸಂಘಟನೆಯ ಹಿರಿಯ ಉಗ್ರ ಮುಲ್ಲಾ ಜನ್ನಾತ್ ಗುಲ್ ಹಾಗೂ ಆತನ 15 ಸಹಚರರು ಡ್ರೋನ್ ದಾಳಿಯಲ್ಲಿ ಮೃತಪಟ್ಟಿರುವುದನ್ನು ರಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ. ಅಫ್ಘಾನಿಸ್ತಾನದ ಕುಂದಝ್ ಪ್ರಾಂತ್ಯದಲ್ಲಿ ಅಮೆರಿಕ ಡ್ರೋನ್ ದಾಳಿ ನಡೆಸಿದ್ದು, ಎರಡು ವಾಹನಗಳಲ್ಲಿ ಸಂಚರಿಸುತ್ತಿದ್ದ ಉಗ್ರರು ಡ್ರೋನ್ ದಾಳಿಗೆ ಸಿಲುಕಿದ್ದಾರೆ.

ಉಗ್ರರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಮೆರಿಕ ಈ ದಾಳಿ ನಡೆಸಿದ್ದು, ಉಗ್ರರು ಬೇರೆಡೆಗೆ ಸ್ಥಲಾಂತರವಾಗುವುದಕ್ಕೆ ಸಿದ್ಧಗೊಳ್ಳುತ್ತಿದ್ದ ವೇಳೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

SCROLL FOR NEXT