ಕಾಬುಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ ಹೊರವಲಯದಲ್ಲಿ ಹೊಸದಾಗಿ ಸೇವೆಗೆ ಸೇರಿದ ತರಬೇತಿ ನಿರತ ಪೊಲೀಸರ ಬಸ್ ಮೇಲೆ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠಿ 40 ಪೊಲೀಸರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಲಿಬಾನ್ ಉಗ್ರ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
ಕಳೆದ ವಾರ ಉಗ್ರರು ಕಾಬುಲ್ ನಲ್ಲಿರುವ ಕೆನಡಾ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳಿ ಭದ್ರಾತಿ ಸಿಬ್ಬಂದಿ ತೆರಳುತ್ತಿದ್ದ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ಮಾಡಿದ್ದರು. ಈ ದಾಳಿಯಲ್ಲಿ 14 ಮಂದಿ ಮೃತಪಟ್ಟಿದ್ದರು.