ಬಾಗ್ದಾದ್: ಇಸಿಸ್ ಉಗ್ರರಿಂದ ಆತ್ಮಾಹುತಿ ಬಾಂಬ್ ಸ್ಫೋಟ; 60 ಸಾವು
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ದಕ್ಷಿಣ ಬಾಗ್ದಾದ್ನ ಹಿಲ್ಲಾ ಪ್ರದೇಶದ ಚೆಕ್ಪೋಸ್ಟ್ ಬಳಿ ಆತ್ಮಾಹುತಿ ಬಾಂಬರ್ ಕಾರ್ ಬಾಂಬ್ ಸ್ಫೋಟಿಸಿದ ಪರಿಣಾಮ...
ಹಿಲ್ಲಾ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ದಕ್ಷಿಣ ಬಾಗ್ದಾದ್ನ ಹಿಲ್ಲಾ ಪ್ರದೇಶದ ಚೆಕ್ಪೋಸ್ಟ್ ಬಳಿ ಆತ್ಮಾಹುತಿ ಬಾಂಬರ್ ಕಾರ್ ಬಾಂಬ್ ಸ್ಫೋಟಿಸಿದ ಪರಿಣಾಮ 60 ಮಂದಿ ಮೃತಪಟ್ಟು, 70 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇರಾಕ್ ರಾಜಧಾನಿ ಬಾಗ್ದಾದ್ ನ ಚೆಕ್ಪೋಸ್ಟ್ನ್ನು ಉಗ್ರರು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಜನರು ಓಡಾಡುವ ಸಂದರ್ಭದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವ ಪೈಕಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.