ವಿದೇಶ

ಭಾರತ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು : ಪಾಕ್ ಪತ್ರಿಕೆ

Srinivas Rao BV

ಇಸ್ಲಾಮಾಬಾದ್: ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸಲು, ನ್ಯಾಯ ಒದಗಿಸಲು ಹೆಣಗಾಡುತ್ತಿರುವ ಭಾರತ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಸುಧಾರಣೆ ಕಂಡುಕೊಳ್ಳಬೇಕಿದೆ ಎಂದು ಪಾಕಿಸ್ತಾನದ ಪತ್ರಿಕೆ ಅಭಿಪ್ರಾಯಪಟ್ಟಿದೆ.
ರೈಸಿಂಗ್ ಇಂಟಾಲರೆನ್ಸ್ ಎಂಬ ಬಗ್ಗೆ ಸಂಪಾದಕೀಯ ಬರೆದಿರುವ ದಿ ನೇಶನ್ ಪತ್ರಿಕೆ, ಅಮೆರಿಕಾದ ಧಾರ್ಮಿಕ ಸ್ವಾತಂತ್ರ್ಯ ಆಯೋಗಕ್ಕೆ ಭಾರತ ಸರ್ಕಾರ ವೀಸಾ ನಿರಾಕರಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವರ ಹುಬ್ಬೇರಿಸಿದೆ. ಭಾರತ ಸರ್ಕಾರದ ಈ ಕ್ರಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ಬಲಿಷ್ಠ ರಾಷ್ಟ್ರವನ್ನಾಗಿ ತೋರಿಸಿಕೊಳ್ಳುವುದರಲ್ಲಿ ಹಲವು ಸಮಸ್ಯೆಗಳಿವೆ ಎಂಬುದನ್ನು ಸೂಚಿಸುತ್ತದೆ ಎಂದು ಪತ್ರಿಕೆ ಅಭಿಪ್ರಾಯಪಟ್ಟಿದೆ. ಇತ್ತೀಚೆಗಷ್ಟೇ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳಿಗೆ ಸಂಬಂಧಿಸಿದಂತೆ ಆತಂಕ ವ್ಯಕ್ತಪಡಿಸಿ ಅಮೇರಿಕಾದ 34 ಸಂಸದರು ಪ್ರಧಾನಿ ಮೋದಿಗೆ ಪತ್ರ ಬರೆದಿರುವುದನ್ನು ಪಾಕ್ ಪತ್ರಿಕೆ ಉಲ್ಲೇಖಿಸಿದೆ.    

SCROLL FOR NEXT