ಚಾರ್ಸಾದ: ಪಾಕಿಸ್ತಾನದ ಚಾರ್ಸಾದ ಜಿಲ್ಲೆಯ ಶಬ್ಖರ್ ನ ಸೆಷನ್ಸ್ ಕೋರ್ಟ್ ಮುಂದೆ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಪತ್ರಕರ್ತ ಸರ್ತಾಜ್ ಖಾನ್ ಪ್ರಕಾರ, ಬಾಂಬ್ ಸ್ಫೋಟದಲ್ಲಿ ಮೂವರು ಪೊಲೀಸರು ಸೇರಿದಂತೆ 8 ಮಂದಿ ಮೃತಪಟ್ಟಿದ್ದು, 20 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಶಬ್ಖದಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.