ಪೇಶಾವರ್ : ಸರ್ಕಾರಿ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಬಾಂಬ್ ಸ್ಫೋಟಗೊಂಡು 15 ಮಂದಿ ಸಾವಿಗೀಡಾದ ಘಟನೆ ವರದಿಯಾಗಿದೆ. ವಾಯುವ್ಯ ಪಾಕಿಸ್ತಾನದ ಪೇಶಾವರ್ ಬಳಿ ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು 25 ಮಂದಿಗೆ ಗಾಯಗಳಾಗಿವೆ.
ಪೇಶಾವರದ ಸುನೇಹರಿ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಸಾವಿಗೀಡಾದವರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗುತ್ತಿದೆ.
ಮರ್ದಾನ್ ನಿಂದ ಸರ್ಕಾರಿ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಆ ಬಸ್‌ನಲ್ಲಿ 40-15 ಮಂದಿ ಪ್ರಯಾಣಿಕರು ಇದ್ದರು. ಬಸ್‌ನೊಳಗೆ ಸ್ಫೋಟಕ ವಸ್ತುಗಳನ್ನಿರಿಸಿ ಸ್ಫೋಟ ನಡೆಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
ಪೊಲೀಸ್ ಮತ್ತು ಭದ್ರತಾಪಡೆ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics