ರಾಘವೇಂದ್ರನ್ ಗಣೇಶನ್ 
ವಿದೇಶ

ಬ್ರಸಲ್ಸ್ ಸ್ಫೋಟದಲ್ಲಿ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ಸಾವು

ಬೆಲ್ಜಿಯಂ ರಾಜಧಾನಿ ಬ್ರಸಲ್ಸ್ ನಲ್ಲಿ ಮಾರ್ಚ್ 22ರಂದು ನಡೆದ ಸರಣಿ ಸ್ಫೋಟದಲ್ಲಿ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ...

ನವದೆಹಲಿ: ಬೆಲ್ಜಿಯಂ ರಾಜಧಾನಿ ಬ್ರಸಲ್ಸ್ ನಲ್ಲಿ ಮಾರ್ಚ್ 22ರಂದು ನಡೆದ ಸರಣಿ ಸ್ಫೋಟದಲ್ಲಿ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರನ್ ಗಣೇಶ್ ಮೃತಪಟ್ಟಿರುವುದು ದೃಢಪಟ್ಟಿದೆ.
ಬ್ರಸಲ್ಸ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಾಘವೇಂದ್ರನ್ ಮೃತಪಟ್ಟಿರುವುದನ್ನು ಖಚಿತಪಡಿಸಿವೆ. 
ರಾಘವೇಂದ್ರನ್ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಮ್ ಸ್ಟರ್ ಡಾಂ ವಿಮಾನ ನಿಲ್ದಾಣದ ಮೂಲಕ ಭಾರತಕ್ಕೆ ಒಯ್ಯಲಾಗುವುದು ಎಂದು ರಾಯಭಾರ ಕಚೇರಿ ಟ್ವೀಟ್ ಮಾಡಿದೆ. 
ಮಾರ್ಚ್ 22ರಂದು ಬ್ರಸಲ್ಸ್ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿ 300 ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟದ ನಡೆದ ಬಳಿಕ ರಾಘವೇಂದ್ರನ್ ನಾಪತ್ತೆಯಾಗಿದ್ದರು. ಈಗ ಅವರು ಮೃತಪಟ್ಟಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ

ಸೋನಮ್, ಸಹೋದರ ಸಾಕು ನಿಲ್ಲಿಸು; ಪ್ರತಿಭಟನೆ ನಿಲ್ಲಿಸಿ ವಿದ್ಯಾರ್ಥಿಗಳೇ ಮನೆಗೆ ಹೋಗಿ: ಪ್ರಧಾನಿ ನೋಡ್ಕೋತಾರೆ; ಸಲ್ಮಾನ್ ಖಾನ್!

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

KPSC ಪರೀಕ್ಷೆ ಅಕ್ರಮ: 80 ಲಕ್ಷಕ್ಕೆ ಸರ್ಕಾರಿ ಉದ್ಯೋಗ ಫಿಕ್ಸ್; ಎಚ್ಚೆತ್ತ ಕರ್ನಾಟಕ ಗೃಹ ಇಲಾಖೆ!