ವಿದೇಶ

ಅಣ್ವಸ್ತ್ರ ಉಸ್ತುವಾರಿ ವಿಷಯದಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದ ಅಮೆರಿಕ

Srinivas Rao BV

ವಾಷಿಂಗ್ ಟನ್: ಅಮೆರಿಕದಲ್ಲಿ ನಡೆಯಲಿರುವ ಅಣು ಭದ್ರತಾ ಶೃಂಗಸಭೆಯಲ್ಲಿ ಭಾಗವಹಿಸಲು 50 ರಾಷ್ಟ್ರಗಳ ನಾಯಕರು ಅಮೆರಿಕಾಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಅಣ್ವಸ್ತ್ರ ಕಾರ್ಯಭಾರದ ವಿಷಯದಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದು ಅಮೆರಿಕ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಬ್ರಸೆಲ್ಸ್ ನಿಂದ ಅಣು ಭದ್ರತಾ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕಾಗೆ ತೆರಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ, ಪ್ರಧಾನಿ ನರೇಂದ್ರ ಮೋದಿ ಅಣು ಭದ್ರತಾ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸಂತಸಗೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನ ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ ಅವರೊಂದಿಗೆ ಸಭೆ ನಡೆಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಭಾರತ ಸರ್ಕಾರ  ಶೃಂಗಸಭೆಗೆ ಹೆಚ್ಚಿನ ಮಹತ್ವ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿಕಿರಣ ವಸ್ತುಗಳ ಭದ್ರತೆ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಜಿತ್ ದೋವಲ್ ಅವರಿಗೆ ಪ್ರತಿಕ್ರಿಯೆ ನೀಡಿರುವ ಜಾನ್ ಕೆರ್ರಿ, ಅಣ್ವಸ್ತ್ರ ವಿಷಯದಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.

SCROLL FOR NEXT